ADVERTISEMENT

ಸುರೇಶ್‌ಗೌಡ ವಿರುದ್ಧ ದೂರು

​ಪ್ರಜಾವಾಣಿ ವಾರ್ತೆ
Published 19 ಜೂನ್ 2019, 16:33 IST
Last Updated 19 ಜೂನ್ 2019, 16:33 IST
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಅಧಿಕಾರಿಗಳಿಗೆ ಕುರುಬ ಸಮುದಾಯದ ಮುಖಂಡರು, ಸಮುದಾಯದ ಜನರು ದೂರು ಬುಧವಾರ ಸಲ್ಲಿಸಿದರು
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಅಧಿಕಾರಿಗಳಿಗೆ ಕುರುಬ ಸಮುದಾಯದ ಮುಖಂಡರು, ಸಮುದಾಯದ ಜನರು ದೂರು ಬುಧವಾರ ಸಲ್ಲಿಸಿದರು   

ತುಮಕೂರು: ತಾಲ್ಲೂಕಿನ ಗೂಳೂರು ಹೋಬಳಿಯ ಹುಳ್ಳೇನಹಳ್ಳಿ ಗ್ರಾಮದಲ್ಲಿ ಮಾಜಿ ಶಾಸಕ ಬಿ.ಸುರೇಶ್‌ಗೌಡ ಅವರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡುವಾಗ ಕುರುಬ ಸಮಾಜವನ್ನು ಅವಹೇಳನಕಾರಿಯಾಗಿ ನಿಂದಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಮುದಾಯದ ಮುಖಂಡರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಬುಧವಾರ ಮನವಿ ಸಲ್ಲಿಸಿದರು.

ಮಾಜಿ ಶಾಸಕರು ನಿಂದಿಸಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನಮ್ಮ ಸಮಾಜದ ಬಗ್ಗೆ ಮಾಜಿ ಶಾಸಕರು ಕೆಟ್ಟ ಪದ ಬಳಿಸಿರುವುದು ನಮಗೆಲ್ಲ ನೋವು ತಂದಿದೆ. ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಮತ್ತೊಮ್ಮೆ ಕುರುಬ ಸಮುದಾಯದ ಬಗ್ಗೆ ಮಾತನಾಡದಂತೆ ಎಚ್ಚರಿಕೆ ನೀಡಬೇಕು ಎಂದು ಒತ್ತಾಯಿಸಿದರು.

ಮಾಜಿ ಶಸಕರು ಕೂಡಲೇ ಕುರುಬ ಸಮುದಾಯದ ಕ್ಷಮೆ ಕೇಳಬೇಕು. ಇಲ್ಲದೇ ಇದ್ದರೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ADVERTISEMENT

ಕೆಂಪಯ್ಯ, ಎಂ.ಶಂಕರ್, ಲಿಂಗರಾಜು, ಡಿ.ನಟರಾಜು, ಚಿಕ್ಕಣ್ಣ, ಕಾಂತರಾಜು ಸೇರಿದಂತೆ ಹಲವು ದೂರಿಗೆ ಸಹಿ ಹಾಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.