ADVERTISEMENT

ಎನ್‍ಎಸ್‍ಯುಐ ವಿದ್ಯಾರ್ಥಿಗಳ ಮೇಲೆ ಹಲ್ಲೆ: ಬಿಜೆಪಿ ಕಾರ್ಯಕರ್ತರ ವಿರುದ್ಧ ದೂರು

​ಪ್ರಜಾವಾಣಿ ವಾರ್ತೆ
Published 7 ಜೂನ್ 2022, 12:22 IST
Last Updated 7 ಜೂನ್ 2022, 12:22 IST

ತಿಪಟೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಮನೆಗೆ ಮುತ್ತಿಗೆ ಹಾಕಿದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್‍ಎಸ್‍ಯುಐ) ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ ಆರೋಪದಡಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಸೋಮವಾರ ರಾತ್ರಿ ದೂರು ದಾಖಲಾಗಿದೆ.

ಜಯಸಿಂಹ ಮಾದಿಹಳ್ಳಿ ಮತ್ತು ಇತರರು ಹಲ್ಲೆ ಮಾಡಿದ್ದು, ಪ್ರಾಣ ಬೆದರಿಕೆ ಹಾಕಿ, ಬೈಕ್ ಜಖಂ ಗೊಳಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವ ಬಗ್ಗೆ ಜೂನ್ 2ರಂದೇ ನಗರ ಠಾಣೆಗೆ ದೂರು ನೀಡಿದ್ದರೂ ಪ್ರಕರಣ ದಾಖಲಾಗಿರಲಿಲ್ಲ. ರಾಜ್ಯದಾದ್ಯಂತ ಹೋರಾಟ ತೀವ್ರವಾಗುತ್ತಿರುವುದನ್ನು ಮನಗಂಡು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.