ADVERTISEMENT

ತುಮಕೂರು: ಲಂಚ ಪಡೆದ ಅಧಿಕಾರಿಗೆ ಕಡ್ಡಾಯ ನಿವೃತ್ತಿ

​ಪ್ರಜಾವಾಣಿ ವಾರ್ತೆ
Published 31 ಮೇ 2023, 15:37 IST
Last Updated 31 ಮೇ 2023, 15:37 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ತುಮಕೂರು: ಲಂಚ ಪಡೆದ ಆರೋಪದ ಮೇಲೆ ಕುಣಿಗಲ್ ತಾಲ್ಲೂಕು ಹುಲಿಯೂರುದುರ್ಗ ಉಪ ನೋಂದಣಾಧಿಕಾರಿ (ಪ್ರಭಾರ) ಯಶೋದ ಅವರನ್ನು ಸೇವೆಯಿಂದ ಕಡ್ಡಾಯ ನಿವೃತ್ತಿಗೊಳಿಸಿ ನೋಂದಣಿ ಹಾಗೂ ಮುದ್ರಾಂಕಗಳ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ.

ಪ್ರಸ್ತುತ, ಯಶೋದ ಅವರು ಗುಬ್ಬಿ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಹುಲಿಯೂರುದುರ್ಗ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಪ್ರಭಾರ ಉಪ ನೋಂದಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಮಯದಲ್ಲಿ ಲಂಚದ ಹಣ ಪಡೆದುಕೊಂಡಿದ್ದರು. ಇದಕ್ಕೆ ಸಂಬಂಧಿಸಿದ ವಿಡಿಯೊ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡಿತ್ತು. ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಕಾರ್ಯದರ್ಶಿ ಬಿ.ಎನ್.ಮಂಜುನಾಥ್ ಕ್ರಮ ಕೈಗೊಳ್ಳುವಂತೆ ಕೋರಿ ದೂರು ಸಲ್ಲಿಸಿದರು.

ADVERTISEMENT

ತನಿಖೆ ಸಮಯದಲ್ಲಿ ಲಂಚ ಪಡೆದಿರುವುದು ಸಾಬೀತಾಗಿದ್ದು, ಸೇವೆಯಿಂದ ಕಡ್ಡಾಯ ನಿವೃತ್ತಿಗೊಳಿಸಲು ಆದೇಶಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.