ADVERTISEMENT

ಮರಾಠ ಅಭಿವೃದ್ಧಿ ನಿಗಮ ರಚನೆಗೆ ಖಂಡನೆ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2020, 2:20 IST
Last Updated 20 ನವೆಂಬರ್ 2020, 2:20 IST
ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಖಂಡಿಸಿ ಮಧುಗಿರಿಯಲ್ಲಿ ಗುರುವಾರ ಕೆಎನ್‌ಆರ್ ಯುವ ಬ್ರಿಗೇಡ್ ಪದಾಧಿಕಾರಿಗಳು ಉಪ ವಿಭಾಗಾಧಿಕಾರಿ ಕಚೇರಿಯ ತಹಶೀಲ್ದಾರ್ ವರದರಾಜು ಅವರಿಗೆ ಗುರುವಾರ ಮನವಿ ಪತ್ರ ಸಲ್ಲಿಸಿದರು
ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಖಂಡಿಸಿ ಮಧುಗಿರಿಯಲ್ಲಿ ಗುರುವಾರ ಕೆಎನ್‌ಆರ್ ಯುವ ಬ್ರಿಗೇಡ್ ಪದಾಧಿಕಾರಿಗಳು ಉಪ ವಿಭಾಗಾಧಿಕಾರಿ ಕಚೇರಿಯ ತಹಶೀಲ್ದಾರ್ ವರದರಾಜು ಅವರಿಗೆ ಗುರುವಾರ ಮನವಿ ಪತ್ರ ಸಲ್ಲಿಸಿದರು   

ಮಧುಗಿರಿ: ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಬಾರದು ಎಂದು ಆಗ್ರಹಿಸಿ ಕೆಎನ್‌ಆರ್ ಯುವ ಬ್ರಿಗೇಡ್ ಪದಾಧಿಕಾರಿಗಳು ಉಪ ವಿಭಾಗಾಧಿಕಾರಿ ಕಚೇರಿಯ ತಹಶೀಲ್ದಾರ್ ವರದರಾಜು ಅವರಿಗೆ ಗುರುವಾರ ಮನವಿ ಪತ್ರ ಸಲ್ಲಿಸಿದರು.

ರಾಜ್ಯ ಸರ್ಕಾರ ಮರಾಠ ನಿಗಮ ಸ್ಥಾಪನೆಗೆ ಮುಂದಾಗಿದೆ. ಇದರಿಂದ ಕೋಟ್ಯಂತರ ಕನ್ನಡಿಗರಿಗೆ ನೋವಾಗಿದೆ. ಕನ್ನಡ ನಾಡು-ನುಡಿಗೆ ಅವಮಾನ ಮಾಡಿದಂತಾಗಿದೆ. ಹಿಂದಿನಿಂದಲೂ ಮರಾಠಿಗರು ಕನ್ನಡ ಭಾಷೆಯನ್ನು ದ್ವೇಷಿಸುತ್ತಾ ಬಂದಿದ್ದು ರಾಜ್ಯೋತ್ಸವ ದಿನವನ್ನು ಕರಾಳ ದಿನವನ್ನಾಗಿ ಆಚರಿಸುತ್ತಿದ್ದಾರೆ. ಆ ಮೂಲಕ ಕನ್ನಡ ನಾಡಿಗೆ ದ್ರೋಹ ಬಗೆಯುತ್ತಾ ಬಂದಿದ್ದಾರೆ ಎಂದು ದೂರಿದರು.

ರಾಜ್ಯದಲ್ಲಿ ವಾಸ ಮಾಡುತ್ತಾ ಸರ್ಕಾರದ ಎಲ್ಲಾ ಸೌಲಭ್ಯ ಪಡೆದುಕೊಂಡು ಮಹಾರಾಷ್ಟ್ರಕ್ಕೆ ಜೈಕಾರ ಹಾಕುತ್ತಾರೆ. ಇಂತಹ ಕನ್ನಡ ದ್ರೋಹಿಗಳಿಗೆ ಬಿಜೆಪಿ ಸರ್ಕಾರ ನಿಗಮ ಸ್ಥಾಪಿಸಲು ಮುಂದಾಗಿರುವುದು ಖಂಡನೀಯ. ಕೂಡಲೇ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು. ಇಲ್ಲವಾದರೆ ಉಗ್ರ ಪ್ರತಿಭಟನೆ ಮಾಡಲಾಗುವುದು. ಸಮಾಜದ ಏಳಿಗೆಗಾಗಿ ಸದಾ ಸೇವೆ ಸಲ್ಲಿಸುತ್ತಿರುವ ಪತ್ರಕರ್ತರ ಅಭಿವೃದ್ಧಿಗೆ ನಿಗಮ ಸ್ಥಾಪನೆ ಮಾಡಬೇಕು ಎಂದು
ಆಗ್ರಹಿಸಿದರು.

ADVERTISEMENT

ಕೆಎನ್ಆರ್ ಯುವ ಬ್ರಿಗೇಡ್ ಅಧ್ಯಕ್ಷ ಎನ್. ನಟರಾಜ್ ಮೌರ್ಯ, ಉಪಾಧ್ಯಕ್ಷ ಬಾಬಾ ಪ್ರೆಸ್ ಸೈಯದ್, ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಸೈಯದ್ ಅಲ್ಲಾವುದ್ದೀನ್, ಜಯ ಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ಡಿ.ಟಿ. ಶಿವಕುಮಾರ್, ಜಮೀರ್, ನರೇಂದ್ರ, ರಂಗಪ್ಪ, ಕುಮಾರ್, ಸುರೇಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.