ADVERTISEMENT

ಭೂ ಕಾಯ್ದೆ ತಿದ್ದುಪಡಿಗೆ ಖಂಡನೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2020, 8:46 IST
Last Updated 17 ಜೂನ್ 2020, 8:46 IST
ಪಾವಗಡ ತಹಶೀಲ್ದಾರ್ ಕಚೇರಿ ಮುಂದೆ ಮಂಗಳವಾರ ಹಸಿರು ಸೇನೆ ತಾಲ್ಲೂಕು ಘಟಕದ ಪದಾಧಿಕಾರಿಗಳು ಪ್ರತಿಭಟಿಸಿದರು
ಪಾವಗಡ ತಹಶೀಲ್ದಾರ್ ಕಚೇರಿ ಮುಂದೆ ಮಂಗಳವಾರ ಹಸಿರು ಸೇನೆ ತಾಲ್ಲೂಕು ಘಟಕದ ಪದಾಧಿಕಾರಿಗಳು ಪ್ರತಿಭಟಿಸಿದರು   

ಪಾವಗಡ: ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುತ್ತಿರುವುದನ್ನು ಖಂಡಿಸಿ ಹಸಿರು ಸೇನೆ, ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳು ಮಂಗಳವಾರ ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟಿಸಿದರು.

ಭೂಸುಧಾರಣೆ ಕಾಯ್ದೆ ತಿದ್ದುಪಡಿಗೆ ಮುಂದಾಗಿರುವ ಸರ್ಕಾರದ ನಿಲುವು ಖಂಡನೀಯ. ಯಾವುದೇ ಕಾಯ್ದೆ ಜಾರಿಗೊಳಿಸಲು, ತಿದ್ದುಪಡಿ ತರುವಲ್ಲಿ ಜನರ, ರೈತರ ಒಳಿತು ಮುಖ್ಯ. ಆದರೆ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಜಾರಿಯಿಂದ ಜನ ಸಾಮಾನ್ಯರು, ರೈತಾಪಿ ವರ್ಗಕ್ಕೆ ಯಾವುದೇ ಪ್ರಯೋಜನವಿಲ್ಲ ಎಂದು ಪ್ರತಿಭಟನಾ ನಿರತರು ದೂರಿದರು.

ತಾಲ್ಲೂಕು ಘಟಕದ ಅಧ್ಯಕ್ಷ ಪೂಜಾರಪ್ಪ, ವೀರಭದ್ರಪ್ಪ, ಪಾತಪ್ಪ, ನಡಿಪನ್ನ, ಸಿದ್ದಪ್ಪ, ಕೃಷ್ಣರಾವ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.