ADVERTISEMENT

ಕೊರೊನಾ ಹೊಸ ಪ್ರಕರಣ: ಮೂಡಿದ ಗೊಂದಲ

​ಪ್ರಜಾವಾಣಿ ವಾರ್ತೆ
Published 3 ಜೂನ್ 2020, 11:11 IST
Last Updated 3 ಜೂನ್ 2020, 11:11 IST

ತುಮಕೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಜಿಲ್ಲೆಯಲ್ಲಿ ಯಾವುದೇ ಕೊರೊನಾ ಸೋಂಕು ಪ್ರಕರಣ ವರದಿಯಾಗಿಲ್ಲ ಎಂದು ಪ್ರಕಟಿಸಿದ ಬೆನ್ನಲ್ಲೇ ರಾಜ್ಯ ಆರೋಗ್ಯ ಇಲಾಖೆ ಪ್ರಕಟಿಸಿದ ವರದಿಯಲ್ಲಿ ಜಿಲ್ಲೆಯಲ್ಲಿ 2 ಹೊಸ ಪ್ರಕರಣಗಳು ದಾಖಲಾಗಿರುವುದಾಗಿ ಪ್ರಕಟಿಸಿದ್ದು, ಗೊಂದಲಕ್ಕೆ ಕಾರಣವಾಯಿತು.

ಈ ಬಗ್ಗೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ನಾಗೇಂದ್ರಪ್ಪ ಸ್ಪಷ್ಟನೆ ನೀಡಿದ್ದು, ‘ರಾಜ್ಯ ಇಲಾಖೆ ಪ್ರಕಟಿಸಿರುವ 2 ಪ್ರಕರಣಗಳು ಹಳೆಯದಾಗಿವೆ. ಪಿ–1612, ಪಿ–1614 ಕೊರೊನಾ ಸೋಂಕಿತ ವ್ಯಕ್ತಿಗಳು ಮೇ 21ರಂದು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪದ್ದತಿಯಂತೆ ಇವರ 10ನೇ ದಿನದ ವರದಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ರಾಜ್ಯಮಟ್ಟದಲ್ಲಿ ಕಣ್ತಪ್ಪಿನಿಂದ ಹಳೆಯ ಪ್ರಕರಣಗಳನ್ನೇ ಹೊಸ ಪ್ರಕರಣವೆಂದು ದಾಖಲಿಸಲಾಗಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT