ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಗುರುವಾರ ಚುನಾವಣಾಧಿಕಾರಿ ಡಾ.ನಂದಿನಿದೇವಿ ಅವರಿಗೆ ಎರಡನೇ ಬಾರಿಗೆ ನಾಮಪತ್ರ ಸಲ್ಲಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಜತೆಯಲ್ಲಿದ್ದರು.
ಈಗಾಗಲೇ ಜಯಚಂದ್ರ ಅವರು ನಾಮಪತ್ರ ಸಲ್ಲಿಸಿದ್ದರು. ಗುರುವಾರ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಮತ್ತೊಮ್ಮೆ ಉಮೇದುವಾರಿಕೆ ಸಲ್ಲಿಸಿದರು. ಇದಕ್ಕೂ ಮುನ್ನ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಮೆರವಣಿಗೆ ಏರ್ಪಡಿಸಲಾಗಿತ್ತು.
ಇದನ್ನೂ ಓದಿ... ಉಪ ಚುನಾವಣೆ ದಿನ 2 ಕ್ಷೇತ್ರಗಳ ನೌಕರರಿಗೆ ರಜೆ: ರಾಜ್ಯ ಸರ್ಕಾರ ಆದೇಶ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.