
ಪ್ರಜಾವಾಣಿ ವಾರ್ತೆಕೆ.ಎನ್ ರಾಜಣ್ಣ
– ಪ್ರಜಾವಾಣಿ ಚಿತ್ರ
ತುಮಕೂರು: ‘ಕಾಂಗ್ರೆಸ್ ಹೈಕಮಾಂಡ್ ಸಾಕಷ್ಟು ಸಲ ಅಚ್ಚರಿ ಎನ್ನುವಂತೆ ಮುಖ್ಯಮಂತ್ರಿ ಆಯ್ಕೆ ಮಾಡಿದೆ’ ಎಂದು ಶಾಸಕ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಯಾವ ರೀತಿ ತೀರ್ಮಾನ ಆಗುತ್ತದೆ ಎಂದು ಹೇಳುವುದು ಕಷ್ಟ ಎಂದರು.
‘ವೀರಪ್ಪ ಮೊಯ್ಲಿ ಮುಖ್ಯಮಂತ್ರಿಯಾದ ಸಮಯದಲ್ಲೂ ರಾಜ್ಯದಲ್ಲಿ ಇಂತಹದ್ದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೈಕಮಾಂಡ್ ತೀರ್ಮಾನದಂತೆ ಮೊಯ್ಲಿ ಮುಖ್ಯಮಂತ್ರಿಯಾದರು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.