ಸಹಕಾರ ಸಚಿವ ಕೆ.ಎನ್. ರಾಜಣ್ಣ
-ಪ್ರಜಾವಾಣಿ ಚಿತ್ರ
ತುಮಕೂರು: ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ ‘ನನಗೇನು ತಾಕೀತು ಮಾಡುತ್ತಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಈಗ ಮತ್ತೊಮ್ಮೆ ಆಕ್ರೋಶ ಹೊರ ಹಾಕಿದ್ದಾರೆ.
‘ಸುರ್ಜೇವಾಲ ರಾಜ್ಯಕ್ಕೆ ಭೇಟಿನೀಡಿ ಅಭಿಪ್ರಾಯ ಸಂಗ್ರಹಿಸಿರುವುದು ತರವಲ್ಲ. ಅವರು ಬಂದು ನಡೆಸಿದ ಪ್ರಕ್ರಿಯೆ ಬಗ್ಗೆ ನನಗೆ ಸಮಾಧಾನವಿಲ್ಲ’ ಎಂದು ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ನಟರಾಜನ್ ಅವರು ಆಂಧ್ರಪ್ರದೇಶಕ್ಕೆ ಭೇಟಿ ನೀಡಿದ್ದರು. ಅವರು ಅಲ್ಲಿ ಒಂದೇ ದಿನಕ್ಕೆ ವಾಪಸ್ ಹೋಗಿದ್ದಾರೆ. ಆದರೆ ರಾಜ್ಯದಲ್ಲಿ ಏನಾಗಿದೆ ನೋಡಿ’ ಎಂದು ಪ್ರಶ್ನಿಸಿದರು.
‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪಕ್ಷದ ಹೈಕಮಾಂಡ್, ಇಲ್ಲವೆ ಶಾಸಕರು ಬದಲಾವಣೆ ಮಾಡಬೇಕು. ಶಾಸಕರು ಬದಲಾಯಿಸಲು ತಯಾರಿಲ್ಲ. ಹೈಕಮಾಂಡ್ ಸಹ ಬದಲಾವಣೆ ಮಾಡುವುದಿಲ್ಲ ಅಂದುಕೊಂಡಿದ್ದೇನೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.