ADVERTISEMENT

ಶಿರಾ | ಕಾಂಗ್ರೆಸ್‌, ಜೆಡಿಎಸ್‌ಗೆ ಮತ; ವ್ಯರ್ಥ- ಡಾ.ಸಿ.ಎನ್.ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2020, 2:04 IST
Last Updated 1 ನವೆಂಬರ್ 2020, 2:04 IST
ಶಿರಾದಲ್ಲಿ ನಾಯಕ ಸಮುದಾಯದವರು ಏರ್ಪಡಿಸಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಉದ್ಘಾಟಿಸಿದರು
ಶಿರಾದಲ್ಲಿ ನಾಯಕ ಸಮುದಾಯದವರು ಏರ್ಪಡಿಸಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಉದ್ಘಾಟಿಸಿದರು   

ಶಿರಾ: ಆಂತರಿಕ ಕಚ್ಚಾಟದಿಂದ ಕಾಂಗ್ರೆಸ್‌ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಮತ್ತೊಂದೆಡೆ ಜೆಡಿಎಸ್‌ ರಾಜ್ಯದಲ್ಲಿ ಪ್ರಸ್ತುತತೆ ಕಳೆದುಕೊಳ್ಳುತ್ತಿದೆ. ಆದ್ದರಿಂದ ಈ ಎರಡೂ ಪಕ್ಷಗಳಿಗೆ ಮತ ಹಾಕುವುದು ವ್ಯರ್ಥ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

‘ಶಿರಾ ಕ್ಷೇತ್ರದಲ್ಲಿ ಪೈಪೋಟಿ ಇರುವುದು ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಮಾತ್ರ. ಜೆಡಿಎಸ್ ಇಲ್ಲಿ‌ ಲೆಕ್ಕಕ್ಕಿಲ್ಲ’ ಎಂದರು.

ನಗರದಲ್ಲಿ ಶನಿವಾರ ನಾಯಕ ಸಮುದಾಯದವರು ಏರ್ಪಡಿಸಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ADVERTISEMENT

ಬಿಜೆಪಿ ಸರ್ಕಾರ ಸರ್ವಜನರ ಹಿತಕ್ಕಾಗಿ ಬದ್ಧತೆಯಿಂದ ಕೆಲಸ ಮಾಡುತ್ತಿದೆ. ದೇಶದಲ್ಲಿ ಎಲ್ಲ ಜಾತಿ, ಧರ್ಮಗಳನ್ನು ಪ್ರತಿನಿಧಿಸುವ ಏಕೈಕ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ.ಬಿಜೆಪಿ ಎಂದರೆ ಅಭಿವೃದ್ಧಿ, ಸರ್ವ ಸಮಾನತೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.