ADVERTISEMENT

ವಿದ್ಯುತ್ ದರ ಏರಿಕೆಗೆ ಕಾಂಗ್ರೆಸ್‌ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2020, 6:11 IST
Last Updated 28 ನವೆಂಬರ್ 2020, 6:11 IST
ವಿದ್ಯುತ್ ದರ ಏರಿಕೆ ಖಂಡಿಸಿ ಶಿರಾದಲ್ಲಿ ಕಾಂಗ್ರೆಸ್ ಮುಖಂಡ ಟಿ.ಬಿ.ಜಯಚಂದ್ರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ವಿದ್ಯುತ್ ದರ ಏರಿಕೆ ಖಂಡಿಸಿ ಶಿರಾದಲ್ಲಿ ಕಾಂಗ್ರೆಸ್ ಮುಖಂಡ ಟಿ.ಬಿ.ಜಯಚಂದ್ರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು   

ಶಿರಾ: ವಿದ್ಯುತ್ ದರ ಏರಿಕೆ ಖಂಡಿಸಿ ಶುಕ್ರವಾರ ಕಾಂಗ್ರೆಸ್ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಕೋವಿಡ್‌ನಿಂದ ಜನರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಇಂತಹ ಸಮಯದಲ್ಲಿ ಜನರ ನೋವಿಗೆ ಸ್ಪಂದಿಸಿ ಅವರಿಗೆ ಹಲವು ರಿಯಾಯಿತಿಗಳನ್ನು ನೀಡುವುದು ಬಿಟ್ಟು, ವಿದ್ಯುತ್ ದರ ಏರಿಕೆ ಮಾಡುವ ಮೂಲಕ‌ ರಾಜ್ಯ ಸರ್ಕಾರ ಜನವಿರೋಧಿ ನೀತಿಗಳನ್ನು ಅನು
ಸರಿಸುತ್ತಿರುವುದು ಖಂಡನೀಯ ಎಂದು ಪ್ರತಿಭಟನಾ ನಿರತರು ಹೇಳಿದರು.

ಮುಖಂಡ ಟಿ.ಬಿ.ಜಯಚಂದ್ರ ಅವರ ನೇತೃತ್ವದಲ್ಲಿ ಪ್ರವಾಸಿ ಮಂದಿರದ ವೃತ್ತದಲ್ಲಿ‌ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ನಂತರ ಮಿನಿ ‌ವಿಧಾನಸೌಧ ತಲುಪಿ ಮನವಿ ಸಲ್ಲಿಸಿದರು.‌

ADVERTISEMENT

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಆರ್. ಮಂಜುನಾಥ್, ಬರಗೂರು ನಟರಾಜು, ಕಾನೂನು ಘಟಕದ ಅಧ್ಯಕ್ಷ ಎಚ್.ಗುರುಮೂರ್ತಿ, ಯುವ ಕಾಂಗ್ರೆಸ್ ಅಧ್ಯಕ್ಷ ದಿವಾಕರ್ ಗೌಡ, ಡಿಸಿಸಿ ಬ್ಯಾಂಕ್ ನಿರ್ದೇಶಕ ಜಿ.ಎಸ್.ರವಿ, ಮುಖಂಡರಾದ ಕಲ್ಕೆರೆ ರವಿಕುಮಾರ್, ಡಿ.ಸಿ.ಆಶೋಕ್, ಶಶಿಧರ್ ಗೌಡ, ಅಬ್ದುಲ್ಲಾ ಖಾನ್, ಜಿ.ರಘು, ಷಣ್ಮುಖಪ್ಪ, ದೇವರಾಜು, ರಾಮಕೃಷ್ಣಪ್ಪ, ಸತ್ಯನಾರಾಯಣ, ಭಾನು ಪ್ರಕಾಶ್, ಚಿದಾನಂದ್, ಹಾರೋಗೆರೆ ಮಹೇಶ್, ಅಜೇಯ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.