
ಪ್ರಜಾವಾಣಿ ವಾರ್ತೆ
ತುಮಕೂರು: ‘ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ನಾಯಕರಂತೆ ಕಾಂಗ್ರೆಸ್ ನಾಯಕರು ಕೂಡ ನನಗೆ ಸಹಕಾರ ನೀಡಿದ್ದಾರೆ’ ಎಂದು ಸಂಸದ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಶನಿವಾರ ಹೇಳಿದ್ದಾರೆ.
ನಗರದ ಹೊರವಲಯದ ಹೆಗ್ಗೆರೆಯಲ್ಲಿ ರೈಲ್ವೆ ಮೇಲು ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ ಅವರು, ‘ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿ ಆಗಿದ್ದ ಸಚಿವ ಜಿ.ಪರಮೇಶ್ವರ ಸಮ್ಮುಖದಲ್ಲಿಯೇ ಈ ರಹಸ್ಯ ಬಹಿರಂಗಪಡಿಸಿದರು.
ಸಚಿವ ಪರಮೇಶ್ವರ ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಹಾರೈಸುತ್ತಲೇ, ‘ನನ್ನ ಗೆಲುವಿಗೆ ಕಾಂಗ್ರೆಸ್ ನಾಯಕರು ಕಾರಣರಾಗಿದ್ದಾರೆ’ ಎಂದರು. ಪಕ್ಕದಲ್ಲಿದ್ದ ಶಾಸಕ ಬಿ.ಸುರೇಶ್‌ಗೌಡ, ‘ಡಿ.ಕೆ.ಶಿವಕುಮಾರ್ ಏನಾಗಬೇಕು?’ ಎಂದು ಪ್ರಶ್ನಿಸಿದರು. ‘ಅದೆಲ್ಲ ಸೆಕೆಂಡರಿ. ಅವರ ನಡವಳಿಕೆಯೂ ಬೇಕಲ್ಲ’ ಎಂದು ಹೇಳಿ ವಿಷಯಾಂತರ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.