ADVERTISEMENT

ತುಮಕೂರು | ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ: ಆರೋಪ

ಅಹಿಂದ ವಕೀಲರ ಒಕ್ಕೂಟದಿಂದ ಪ್ರತಿಭಟನೆಯ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 30 ಜುಲೈ 2024, 6:04 IST
Last Updated 30 ಜುಲೈ 2024, 6:04 IST

ತುಮಕೂರು: ‘ಅಹಿಂದ ಚಿಂತನೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮನುವಾದಿಗಳು, ಪಟ್ಟಭದ್ರ ಹಿತಾಸಕ್ತರು ಷಡ್ಯಂತ್ರ ಮಾಡುತ್ತಿದ್ದಾರೆ’ ಎಂದು ಜಿಲ್ಲಾ ಅಹಿಂದ ವಕೀಲರ ಒಕ್ಕೂಟ ಆರೋಪಿಸಿದೆ.

ಸಿದ್ದರಾಮಯ್ಯ ಅವರ ಪ್ರಗತಿಪರ ಚಿಂತನೆ ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದೆ. ಹಿಂದುಳಿದ, ಸೂಕ್ಷ್ಮ, ಅಲ್ಪಸಂಖ್ಯಾತರ ಪರ ಚಿಂತನೆಯೊಂದಿಗೆ ಸರ್ಕಾರ ಮುನ್ನಡೆಸುತ್ತಿದ್ದಾರೆ. ಅವರ ನಾಯಕತ್ವ ಸಹಿಸದೆ ರಾಜಕೀಯ ಷಡ್ಯಂತ್ರದಿಂದ ಇಲ್ಲ–ಸಲ್ಲದ ಆರೋಪ ಮಾಡುತ್ತಿರುವುದು ಖಂಡನೀಯ ಎಂದು ಒಕ್ಕೂಟದ ಸಂಚಾಲಕ ಎಸ್‌.ಚಿಕ್ಕರಾಜು ಇತರರು ತಿಳಿಸಿದ್ದಾರೆ.

ರಾಜ್ಯದ ಪ್ರಗತಿ ಹಾಗೂ ಅಹಿಂದ ವರ್ಗಗಳ ಏಳಿಗೆಗಾಗಿ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು. ಸಿದ್ದರಾಮಯ್ಯ ವಿರುದ್ಧ ಪಿತೂರಿ ಮಾಡುವರರ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.