ADVERTISEMENT

ಮುಂದುವರಿದ ಆಸ್ಪತ್ರೆ ಗುತ್ತಿಗೆ ನೌಕರರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2019, 13:34 IST
Last Updated 19 ಜೂನ್ 2019, 13:34 IST

ತಿಪಟೂರು: ನಗರದ ಸಾರ್ವಜನಿಕ ಆಸ್ಪತ್ರೆಯ ಸುಮಾರು 30ಕ್ಕೂ ಹೆಚ್ಚು ಹೊರ ಗುತ್ತಿಗೆ ನೌಕರರು ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಬುಧವಾರ ಪ್ರತಿಭಟನೆ ಮುಂದುವರಿಸಿದರು.

ಮೂರು ತಿಂಗಳಿಂದ ಬಾಕಿ ಇರುವ ವೇತನ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರೂ ಗುತ್ತಿಗೆದಾರರು ಸ್ಪಂದಿಸಿಲ್ಲ. ಅಧಿಕಾರಿಗಳು ಹಾರಿಕೆ ಉತ್ತರ ಕೊಡುತ್ತಿದ್ದಾರೆ. ಸಂಬಳ ಇಲ್ಲದೆ ಸಂಸಾರ ಕಷ್ಟವಾಗಿದ್ದು, ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ನೌಕರರು ತಿಳಿಸಿದರು.

ನೌಕರರಾದ ಧರ್ಮಾವತಿ ಮಾತನಾಡಿ, ವೇತನ ನೀಡುವವರೆಗೆ ಕೆಲಸ ಮಾಡುವುದಿಲ್ಲ. ನಮ್ಮನ್ನು ಕೆಲಸದಿಂದ ಕೈ ಬಿಡುವ ಪ್ರಯತ್ನ ಮಾಡಿದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.