ADVERTISEMENT

ಮದ್ಯ ವ್ಯಸನಿಗಳ ಹಾವಳಿ ನಿಯಂತ್ರಿಸಿ

ಪ್ರತಿಭಟನೆ ನಡೆಸಿದ ಹುಸೇನ್‌ಪುರ ಮಹಿಳೆಯರು; ತಹಶೀಲ್ದಾರ್‌ಗೆ ಮನವಿ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2020, 7:48 IST
Last Updated 6 ಆಗಸ್ಟ್ 2020, 7:48 IST
ಪಾವಗಡ ತಾಲ್ಲೂಕು ಹುಸೇನ್‌ಪುರ ಗ್ರಾಮದ ಮದ್ಯದಂಗಡಿ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಬುಧವಾರ ತಹಶೀಲ್ದಾರ್ ವರದರಾಜು ಅವರಿಗೆ ಮನವಿ ಸಲ್ಲಿಸಿದರು
ಪಾವಗಡ ತಾಲ್ಲೂಕು ಹುಸೇನ್‌ಪುರ ಗ್ರಾಮದ ಮದ್ಯದಂಗಡಿ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಬುಧವಾರ ತಹಶೀಲ್ದಾರ್ ವರದರಾಜು ಅವರಿಗೆ ಮನವಿ ಸಲ್ಲಿಸಿದರು   

ಪಾವಗಡ: ತಾಲ್ಲೂಕಿನ ಹುಸೇನ್‌ಪುರ ಗ್ರಾಮದಲ್ಲಿ ಮದ್ಯ ವ್ಯಸನಿಗಳ ಹಾವಳಿ ನಿಯಂತ್ರಿಸಬೇಕು. ಮದ್ಯದಂಗಡಿ ಸ್ಥಳಾಂತರಿಸಬೇಕು ಎಂದು ಗ್ರಾಮದ ಮಹಿಳೆಯರು ಬುಧವಾರ ತಹಶೀಲ್ದಾರ್ ವರದರಾಜು ಅವರಿಗೆ ಮನವಿ ಸಲ್ಲಿಸಿದರು.

ಗ್ರಾಮದಲ್ಲಿ ದಿನವಿಡೀ ಮದ್ಯ ಮಾರಾಟ ಮಾಡಲಾಗುತ್ತಿದೆ. ಮದ್ಯ ಮಾರಾಟ ಕೇಂದ್ರಕ್ಕೆ ಸುತ್ತಮುತ್ತಲ ಗ್ರಾಮಗಳು ಸೇರಿದಂತೆ ಆಂಧ್ರದಿಂದಲೂ ನೂರಾರು ಮಂದಿ ಬರುತ್ತಾರೆ. ಇದರಿಂದ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚುತ್ತಿವೆ ಎಂದು ಮಹಿಳೆಯರು ಆರೋಪಿಸಿದರು.

ಮದ್ಯ ಸೇವಿಸಿ ರಸ್ತೆಗಳಲ್ಲಿ ತೂರಾಡುವವರ ಮಧ್ಯೆ ಮಹಿಳೆಯರು, ಮಕ್ಕಳು ಸಂಚರಿಸಲು ಸಾಧ್ಯವಾಗುತ್ತಿಲ್ಲ. ರಸ್ತೆ ಬದಿ, ಜಮೀನುಗಳಲ್ಲಿ ಹಗಲಿನ ವೇಳೆ ಗುಂಪು ಗುಂಪಾಗಿ ಕುಳಿತು ಮದ್ಯ ಸೇವಿಸುವುದರಿಂದ ಜಮೀನುಗಳಿಗೆ ಹೋಗಲು ಮುಜುಗರವಾಗುತ್ತದೆ ಎಂದು ದೂರಿದರು.

ADVERTISEMENT

ಬೆಳಿಗ್ಗೆಯಿಂದ ತಡರಾತ್ರಿಯವರೆಗೆ ನಿತ್ಯ ಮದ್ಯ ಮಾರಾಟ ಮಾಡುವುದರಿಂದ ಗ್ರಾಮಸ್ಥರಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ. ಕೂಲಿ ಕೆಲಸಕ್ಕೆ ಹೋಗಲು,
ಕೆಲಸ ಕಾರ್ಯಗಳನ್ನು ಮಾಡಿಕೊಳ್ಳಲು ಅಡ್ಡಿಯಾಗುತ್ತಿದೆ ಎಂದು
ದೂರಿದರು.

ಕಾನೂನು ಬಾಹಿರವಾಗಿ ಮದ್ಯ ಮಾರಾಟ, ಸಾಗಣೆ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.

ಸುಕನ್ಯಾ, ಯಶೋದಮ್ಮ, ವರಲಕ್ಷ್ಮಿ, ಮಂಜುಳಾ, ಅನಿತಾ, ಪದ್ಮಾ, ಲಲಿತಾ, ರತ್ನಮ್ಮ, ಗಂಗಮ್ಮ, ಲಕ್ಷ್ಮಿದೇವಿ, ಲೀಲಾವತಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.