ತಿಪಟೂರು: ಕೊರೊನಾ ಎರಡನೇ ಅಲೆಯನ್ನು ಯಶಸ್ವಿಯಾಗಿ ತಡೆಗಟ್ಟಲು ಸರ್ಕಾರ ಸನ್ನದ್ಧವಾಗಿದ್ದು ಸಾರ್ವಜನಿಕರ ಸಹಕಾರ ದೊರೆತರೆ ಮಾತ್ರವೇ ಶೀಘ್ರವೇ ಸೋಂಕನ್ನು ದೂರ ಮಾಡುವಲ್ಲಿ ಯಶಸ್ವಿಯಾಗಬಹುದು ಎಂದು ಶಾಸಕ ಬಿ.ಸಿ. ನಾಗೇಶ್ ತಿಳಿಸಿದರು.
ನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಕೋವಿಡ್– 19 ಲಸಿಕೆ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನಗರಸಭೆ ಅಧ್ಯಕ್ಷ ಪಿ.ಜೆ. ರಾಮಮೋಹನ್, ತಾಲ್ಲೂಕು ವೈದ್ಯಾಧಿಕಾರಿ ರವಿಕುಮಾರ್, ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಪ್ರಹ್ಲಾದ್, ಡಾ.ರವಿ, ಡಾ.ಶಿವಕುಮಾರ್, ತಹಶೀಲ್ದಾರ್ ಆರ್.ಜೆ. ಚಂದ್ರಶೇಖರ್, ನಗರಸಭೆ ಪೌರಾಯುಕ್ತ ಉಮಾಕಾಂತ್, ಸಿಡಿಪಿಒ ಪಿ. ಓಂಕಾರಪ್ಪ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ದಿನೇಶ್ ಇದ್ದರು.
45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಾಕಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.