ADVERTISEMENT

ಕೊರೊನಾ ನಿರ್ವಹಣೆ; ಸರ್ಕಾರ ವಿಫಲ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2020, 8:40 IST
Last Updated 21 ಆಗಸ್ಟ್ 2020, 8:40 IST
ಕುಣಿಗಲ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಡಾ.ರಂಗನಾಥ್ ನೇತೃತದಲ್ಲಿ ಪ್ರತಿಭಟನೆ ನಡೆಸಿ ಶಿರಸ್ತೇದಾರ್‌ ಜಯಪ್ಪಾಚಾರ್ ಅವರಿಗೆ ಮನವಿ ಸಲ್ಲಿಸಿದರು
ಕುಣಿಗಲ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಡಾ.ರಂಗನಾಥ್ ನೇತೃತದಲ್ಲಿ ಪ್ರತಿಭಟನೆ ನಡೆಸಿ ಶಿರಸ್ತೇದಾರ್‌ ಜಯಪ್ಪಾಚಾರ್ ಅವರಿಗೆ ಮನವಿ ಸಲ್ಲಿಸಿದರು   

ಕುಣಿಗಲ್: ದೇಶ ಜನ ಕೊರೊನಾ ಮತ್ತು ಅತಿವೃಷ್ಠಿಗಳ ಸಂಕಷ್ಟದಲ್ಲಿರುವಾಗ ಬಿಜೆಪಿ ಸರ್ಕಾರ ಜನ, ರೈತ, ಕಾರ್ಮಿಕ ವಿರೋಧಿ ನೀತಿಯನ್ನು ಜಾರಿಗೆ ತರುತ್ತಿದೆ. ಇದು ಉಳ್ಳವರಿಗೆ ವರದಾನವಾದರೆ, ಶ್ರೀಸಾಮಾನ್ಯನಿಗೆ ಶಾಪವಾಗಿ ಪರಿಣಮಿಸುತ್ತಿದೆ ಎಂದು ಶಾಸಕ ಡಾ.ರಂಗನಾಥ್ ತಿಳಿಸಿದರು.

ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಶಿರಸ್ತೇದಾರ್ ಜಯಪ್ಪಾಚಾರ್ ಅವರಿಗೆ ಮನವಿ ಸಲ್ಲಿಸಿದರು.

ರೈತ ವಿರೋಧಿ ಭೂಸುಧಾರಣೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ವಿರೋಧಿ ಕಾಯ್ದೆ ತಿದ್ದುಪಡಿಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ADVERTISEMENT

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಣ್ಣಗೌಡ, ಪುರಸಭೆ ಸದಸ್ಯರು, ಮುಖಂಡರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.