ADVERTISEMENT

ಕ್ವಾರಂಟೈನ್‌ನಲ್ಲಿದ್ದ 11 ಮಂದಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 22 ಮೇ 2020, 16:46 IST
Last Updated 22 ಮೇ 2020, 16:46 IST

ಶಿರಾ: ನಗರದ ತಾಯಿ ಮತ್ತು ಮಗು ಆಸ್ಪತ್ರೆಯಲ್ಲಿ ಕ್ವಾರಂಟೈನ್‌ನಲ್ಲಿ ಇದ್ದ 11 ಮಂದಿಯನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ.

ಬೆಂಗಳೂರಿನ ಪಾದರಾಯನಪುರದಿಂದ ಬಂದಿದ್ದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 11 ಮಂದಿಯನ್ನು 16 ದಿನಗಳಿಂದ ಕ್ವಾರಂಟೈನ್ ಮಾಡಲಾಗಿತ್ತು.

ಎರಡು ಬಾರಿ ಅವರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಿದ್ದು, ಎರಡು ಬಾರಿ ಸಹ ನೆಗಟೀವ್ ಬಂದ ಕಾರಣ ಶುಕ್ರವಾರ ಅವರನ್ನು ಮನೆಗೆ ಕಳುಹಿಸಲಾಗಿದೆ. ಮನೆಯಲ್ಲಿ ಅವರನ್ನು 14 ದಿನ ಕಾಲ ಕ್ವಾರಂಟೈನ್ ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.