ADVERTISEMENT

ಕೊರೊನಾ ತಡೆ: ತುಮಕೂರು ಮಾದರಿ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2020, 11:00 IST
Last Updated 9 ಏಪ್ರಿಲ್ 2020, 11:00 IST

ತುಮಕೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ತುಮಕೂರು ನಗರದಲ್ಲಿ ಸ್ಮಾರ್ಟ್‌ಸಿಟಿ ಕೈಗೊಂಡಿರುವ ಅಭಿಯಾನವನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಂಟಿ ಕಾರ್ಯದರ್ಶಿ ಲಾವ ಅಗರ್‌ವಾಲ್ ಪ್ರಶಂಸಿಸಿದ್ದಾರೆ.

ಕ್ವಾರಂಟೈನ್ ಮೇಲೆ ಕಣ್ಗಾವಲು ಹಾಕುವ, ಚಟುವಟಿಕೆಗಳನ್ನು ಸಮಗ್ರವಾಗಿ ಪರಿಶೀಲಿಸುವ ಸ್ಮಾರ್ಟ್ ತಂತ್ರಜ್ಞಾನವನ್ನು ಅಳವಡಿಸಿಕೊಂಡು ತುಮಕೂರು ದೇಶಕ್ಕೇ ಮಾದರಿಯಾಗಿದೆ ಎಂದು ಸಚಿವರು ತಿಳಿಸಿರುವುದಾಗಿ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಟಿ.ಭೂಬಾಲನ್ ತಿಳಿಸಿದ್ದಾರೆ.

ಸ್ಮಾರ್ಟ್‌ಸಿಟಿ ಯೋಜನೆಗೆ ಒಳಪಡುವ ಸೂರತ್ ಮತ್ತು ಪುಣೆ ನಗರಗಳು ಸಹ ಇದೇ ತಂತ್ರಜ್ಞಾನ ಅಳವಡಿಸಿಕೊಂಡಿವೆ. ಹೋಂ ಕ್ವಾರಂಟೈನ್‍ನಲ್ಲಿರುವವರ ನಿರ್ವಹಣೆ, ನಿಗಾ, ಪತ್ತೆ ಹಚ್ಚುವ, ಮಾಹಿತಿ ಪ್ರಸರಣ, ತರಬೇತಿ ನೀಡುವ, ವಿಶ್ಲೇಷಣೆ ಮಾಡುವ, ಕೌನ್ಸೆಲಿಂಗ್ ಮತ್ತಿತರ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ದಿಗ್ಬಂಧನದಲ್ಲಿರುವವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.