ಶಿರಾ: ಕೊರೊನಾ ವಿರುದ್ಧ ತಾಲ್ಲೂಕು ಆಡಳಿತ ಸಮರೋಪಾಧಿಯಾಗಿ ಕಾರ್ಯನಿರ್ವಹಿಸುತ್ತಿದೆ. ಪ್ರತಿಯೊಬ್ಬ ನಾಗರಿಕರು ಅಧಿಕಾರಿಗಳಿಗೆ ಬೆಂಬಲವಾಗಿ ನಿಲ್ಲಬೇಕು. ಅಗತ್ಯಬಿದ್ದರೆ ಸಿಎಂಜಿ ಫೌಂಡೇಷನ್ ವಾಹನ ಹಾಗೂ ಪ್ರೆಸಿಡೆನ್ಸಿ ಶಾಲೆಯ ಬಸ್‌ಗಳನ್ನು ತಾಲ್ಲೂಕು ಆಡಳಿತ ಬಳಸಿಕೊಳ್ಳಬಹುದು ಎಂದು ಪೊಲೀಸ್ ಇಲಾಖೆಗೆ ಪ್ರೆಸಿಡೆನ್ಸಿ ಶಾಲೆಯ ಸಂಸ್ಥಾಪಕ ಅಧ್ಯಕ್ಷ ಚಿದಾನಂದ ಎಂ.ಗೌಡ ಮನವಿ ಮಾಡಿದರು.
ನಗರದ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಊಟ ಮತ್ತು ಮಾಸ್ಕ್ ವಿತರಿಸಿ ಮಾತನಾಡಿದರು.
ಡಿವೈಎಸ್‌ಪಿ ಕುಮಾರಪ್ಪ ಮಾತನಾಡಿ, ಕೊರೊನಾ ವಿರುದ್ದದ ಹೋರಾಟಕ್ಕೆ ಪ್ರತಿಯೊಬ್ಬರ ಸಹಕಾರ ಅತ್ಯವಶ್ಯ ಜನರು ಸಹ ಯಾವುದೇ ಕಾರಣಕ್ಕೂ ಮನೆ ಬಿಟ್ಟು ಹೊರಗೆ ಬರದೆ ಕೊರೊನಾ ನಿರ್ಮೂಲನೆಗೆ ಸಹಕರಿಸಬೇಕು ಎಂದರು.
ಸಿಪಿಐ ಶಿವಕುಮಾರ್, ಬಿಜೆಪಿ ನಗರ ಘಟಕದ ಅಧ್ಯಕ್ಷ ವಿಜಯರಾಜು, ಮಾಜಿ ಅಧ್ಯಕ್ಷ ಪಡಿ ರಮೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.