ತುಮಕೂರು: ಕೆಪಿಎಸ್‌ಸಿ ನಡೆಸಿದ ಕೆಎಎಸ್ ಪರೀಕ್ಷೆಯನ್ನು ಕನ್ನಡ ಮಾಧ್ಯಮದಲ್ಲಿ ಬರೆದ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸುವಂತೆ ಕೋರಿ ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಪ್ರಶ್ನೆಗಳನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ಅನುವಾದ ಮಾಡುವಾಗ ಆಗಿರುವ ತಪ್ಪಿನಿಂದ ಕನ್ನಡ ಮಾಧ್ಯಮದಲ್ಲಿ ಪರೀಕ್ಷೆ ಬರೆದಿರುವ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ತೊಂದರೆಯಾಗಿದೆ. ಮುಂದಿನ ದಿನಗಳಲ್ಲಿ ಇಂತಹವರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಅನುವಾದದಲ್ಲಿ ತಜ್ಞರಾದವರು ಹಾಗೂ ಕನ್ನಡ ಭಾಷೆಯಲ್ಲಿ ಪ್ರಾವೀಣ್ಯ ಹೊಂದಿದ ತಜ್ಞರ ಸಮಿತಿ ರಚಿಸಿ ಗ್ರಾಮೀಣ ವಿದ್ಯಾರ್ಥಿಗಳ ಹಿತ ಕಾಪಾಡಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
ಪ್ರಶ್ನೆ ಪತ್ರಿಕೆಗಳಲ್ಲಿ ಅನೇಕ ದೋಷಗಳು ಉಂಟಾಗಿವೆ. ಪ್ರಶ್ನೆಗಳು ಅರ್ಥವಾಗದೆ ಅನುತ್ತೀರ್ಣರಾಗಿ ಭವಿಷ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇಂತಹ ಪರಿಸ್ಥಿತಿ ಮುಂದುವರಿದರೆ ಗ್ರಾಮೀಣ ಮಕ್ಕಳ ಭವಿಷ್ಯ ಹಾಳಾಗಲಿದೆ ಎಂದು ಪತ್ರದಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.