ತುಮಕೂರು: 'ಪ್ರಜಾವಾಣಿ', 'ಡೆಕ್ಕನ್ ಹೆರಾಲ್ಡ್' ಮತ್ತು ಇನ್ ಸೈಟ್ಸ್ ಸಂಸ್ಥೆಯಿಂದ ನಗರದ ಎಂಪ್ರೆಸ್ ಶಾಲೆಯ ಸಭಾಂಗಣದಲ್ಲಿ ಆಯೋಜಿಸಿರುವ 'ಗೈಡಿಂಗ್ ಫೋರ್ಸ್' ಐಎಎಸ್, ಐಪಿಎಸ್ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ಕಾರ್ಯಾಗಾರಕ್ಕೆ ಕ್ಷಣಗಣನೆ ಆರಂಭವಾಗಿದೆ.
ವಿವಿಧ ಕಾಲೇಜುಗಳು ವಿದ್ಯಾರ್ಥಿಗಳು, ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಯಲ್ಲಿ ತೊಡಗಿಸಿಕೊಂಡಿರುವ ನೂರಾರು ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದಾರೆ. ಎಲ್ಲರು ಉತ್ಸಾಹದಿಂದಲೇ ಕಾರ್ಯಾಗಾರದತ್ತ ಹೆಜ್ಜೆ ಹಾಕುತ್ತಿದ್ದಾರೆ. ಸರತಿ ಸಾಲಿನಲ್ಲಿ ನಿಂತು ನೋಂದಣಿ ಮಾಡಿಸಿಕೊಳ್ಳುತ್ತಿದ್ದಾರೆ.
ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಾರ್ಯಾಗಾರಕ್ಕೆ ಚಾಲನೆ ನೀಡಲಿದ್ದಾರೆ. ಜಿ.ಪಂ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ, ಇನ್ ಸೈಟ್ಸ್ ಸಂಸ್ಥೆಯ ಸಂಸ್ಥಾಪಕ ಜಿ.ಬಿ.ವಿನಯ್ ಕುಮಾರ್ ಮೊದಲಾದವರು ಭಾಗವಹಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.