ADVERTISEMENT

ಸಿದ್ಧಗಂಗಾ ಮಠ: ಶಿವಕುಮಾರ ಸ್ವಾಮೀಜಿ ಜಯಂತಿಗೆ ಕ್ಷಣ ಗಣನೆ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2022, 4:42 IST
Last Updated 1 ಏಪ್ರಿಲ್ 2022, 4:42 IST
ಸಿದ್ಧಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ ಜಯಂತಿ ಆಚರಣೆಗೆ ವೇದಿಕೆ ಸಿದ್ಧ
ಸಿದ್ಧಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ ಜಯಂತಿ ಆಚರಣೆಗೆ ವೇದಿಕೆ ಸಿದ್ಧ   

ತುಮಕೂರು: ಸಿದ್ಧಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ ಜಯಂತಿ ಆಚರಣೆಗೆ ಕ್ಷಣ ಗಣನೆ ಆರಂಭವಾಗಿದೆ.

ಮಠದಲ್ಲಿ ಬೆಳಗಿನಿಂದಲೇ ವಿವಿಧ ಧಾರ್ಮಿಕ ಕಾರ್ಯಗಳು ಆರಂಭವಾಗಿವೆ.ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಗದ್ದುಗೆ ಪೂಜೆ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.

ಜಿಲ್ಲೆ ಹಾಗೂ ರಾಜ್ಯದ ವಿವಿಧೆಡೆಗಳಿಂದ ಭಕ್ತರು ಜಯಂತಿ ಆಚರಣೆಯಲ್ಲಿ ಪಾಲ್ಗೊಳ್ಳಲು ಮಠಕ್ಕೆ ಆಗಮಿಸುತ್ತಿದ್ದಾರೆ.

ADVERTISEMENT

ಕೇಂದ್ರ ಗೃಹಸಚಿವ ಅಮಿತ್ ಶಾ ಹಾಗೂ ಇತರ ಮುಖಂಡರೂ ಭಾಗವಹಿಸಲಿದ್ದಾರೆ.

ಗಣ್ಯರ ಸ್ವಾಗತಕ್ಕೆ ಸಿದ್ಧತೆ ಜೋರು
ಮಠಕ್ಕೆ ಭೇಟಿ ನೀಡುವ ಗಣ್ಯರನ್ನು ಕುಂಭಗಳ ಮೆರವಣಿಗೆಯ ಮೂಲಕ ಸ್ವಾಗತಿಸಲು ಸಿದ್ಧಗಂಗಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಸಿದ್ಧತೆ ಕೈಗೊಂಡಿದ್ದಾರೆ.

115 ಕುಂಭಗಳ ಮೆರವಣಿಗೆಯ ಮೂಲಕ ಅತಿಥಿಗಳ ಸ್ವಾಗತಕ್ಕೆ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

ಪ್ರತಿವರ್ಷ ಶಿವಕುಮಾರ ಸ್ವಾಮೀಜಿ ಹುಟ್ಟು ಹಬ್ಬದ ದಿನದಂದು ಕಳಸಾ ಕುಂಭಗಳ ವ್ಯವಸ್ಥೆ ಮಾಡಲಾಗುತ್ತಿದೆ. ಸಿದ್ಧಗಂಗಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳೇ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಬಿ.ಎಡ್ ಕಾಲೇಜಿನ ಪ್ರಾಂಶುಪಾಲರಾದ ರಾಜ ಸುಲೋಚನಾ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.