ADVERTISEMENT

ಕೆಎಸ್ಆರ್‌ಟಿಸಿ ಬಸ್, ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ: ದಂಪತಿ ಸಾವು

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2022, 7:08 IST
Last Updated 27 ಮಾರ್ಚ್ 2022, 7:08 IST
   

ತುಮಕೂರು: ಕೆಎಸ್ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾಗಿ, ಸ್ಥಳದಲ್ಲಿಯೇ ದಂಪತಿ ಮೃತಪಟ್ಟಿರುವ ಘಟನೆ ಮಧುಗಿರಿ ತಾಲ್ಲೂಕಿನಕಸಬಾ ವ್ಯಾಪ್ತಿಯ ಕವಾಡಿಗರ ಪಾಳ್ಯದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.

ಬೈಕ್‌ನಲ್ಲಿ ಸಾಗುತ್ತಿದ್ದ ತಾಲ್ಲೂಕಿನ ಗೊಂದಿಹಳ್ಳಿಯ ಶಾಂಭಶಿವಯ್ಯ( 73) ಹಾಗೂ ಶಂಕರಮ್ಮ (67) ಅಪಘಾತದಲ್ಲಿ ಮೃತಪಟ್ಟಿದ್ದಾರೆ. ತುಮಕೂರಿನಿಂದ ಬರುತ್ತಿದ್ದ ಬೈಕ್‌ಗೆ ಮಧುಗಿರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಕವಾಡಿಗರ ಪಾಳ್ಯದ ಸಮೀಪ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಬಸ್‌ ವಶಕ್ಕೆ ಪಡೆದು ಚಾಲಕನನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT