ADVERTISEMENT

ಶ್ರೀಗಂಧ ಮರ ಅಕ್ರಮ ಮಾರಾಟ; 5 ವರ್ಷ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 12 ಜುಲೈ 2019, 12:50 IST
Last Updated 12 ಜುಲೈ 2019, 12:50 IST

ತುಮಕೂರು: ಶ್ರೀಗಂಧ ಮರಗಳನ್ನು ಅಕ್ರಮವಾಗಿ ಕಡಿದು ಸ್ವಾಧೀನ ಪಡಿಸಿಕೊಂಡಿದ್ದ ಆರೋಪದ ಮೇಲೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಲಕ್ಷ್ಮಿ ಎಂಬುವವರಿಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರಾಜೇಂದ್ರ ಬಾದಾಮಿಕರ್ 5 ವರ್ಷ ಕಠಿಣ ಶಿಕ್ಷೆ ಹಾಗೂ ₹ 50 ಸಾವಿರ ದಂಡ ವಿಧಿಸಿದ್ದಾರೆ.

ಪ್ರಕರಣದ ಹಿನ್ನೆಲೆ: ಆರೋಪಿಯು ಗುಬ್ಬಿ ಅರಣ್ಯ ವಲಯ ವ್ಯಾಪ್ತಿಯ ಮಾರಶೆಟ್ಟಿಹಳ್ಳಿ ರಾಜ್ಯ ಮೀಸಲು ಅರಣ್ಯದ ಹಂಡನಹಳ್ಳಿ ಗುಡ್ಡದ ತಪ್ಪಲಿನಲ್ಲಿ 17 ಶ್ರೀಗಂಧದ ಮರಗಳನ್ನು ಅಕ್ರಮವಾಗಿ ಕಡಿದಿದ್ದರು. ದೊಡ್ಡಗುಣಿ ಉಪವಲಯ ಅರಣ್ಯಾಧಿಕಾರಿ ಬಸವರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಲಕ್ಷ್ಮಿ ಬಳಿ ಶ್ರೀಗಂಧದ ಮರಗಳಿರುವುದು ಸಾಬೀತಾಗಿತ್ತು.

ಅರಣ್ಯ ಅಧಿಕಾರಿ ಆರ್.ರಮೇಶ್ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಅಭಿಯೋಜಕಿ ಕೆ.ಹೆಚ್.ಶ್ರೀಮತಿ ವಾದ ಮಂಡಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.