ADVERTISEMENT

ರಾಜಕೀಯ ದ್ವೇಷಕ್ಕೆ ಕೊಲೆ; ಜೀವಾವಧಿ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 17 ಜುಲೈ 2020, 14:31 IST
Last Updated 17 ಜುಲೈ 2020, 14:31 IST

ತುಮಕೂರು: ಮಧುಗಿರಿ ತಾಲ್ಲೂಕಿನಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದ್ದ ವೀರಣ್ಣನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಜಿ.ರಾಜಣ್ಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಲಕ್ಷ್ಮಯ್ಯ, ರವಿ ಎಂಬಾತನಿಗೆ ತುಮಕೂರು ಜಿಲ್ಲಾ 3ನೇ ಹೆಚ್ಚುವರಿ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ತಲಾ ₹ 10 ಸಾವಿರ ದಂಡ ವಿಧಿಸಿದೆ.

ರಾಜಣ್ಣ ಅವರ ರಾಜಕೀಯ ಏಳಿಗೆ ಸಹಿಸದೆ 2015ರಲ್ಲಿ ಲಕ್ಷ್ಮಯ್ಯ, ಆತನ ಮಕ್ಕಳಾದ ರವಿ, ನಿಜಲಿಂಗಪ್ಪ ಹಾಗೂ ಆತನ ತಮ್ಮ ಸಿದ್ಧಲಿಂಗಪ್ಪ ಕೊಲೆ ಸಂಚು ರೂಪಿಸಿದ್ದರು. ವೀರಣ್ಣನಹಳ್ಳಿ ಸಮುದಾಯದ ಮುಂಭಾಗ ಮಚ್ಚಿನಿಂದ ಹಲ್ಲೆ ನಡೆಸಿದ್ದರು. ರಾಜಣ್ಣ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರು. ಬಡವನಹಳ್ಳಿ ಪೊಲೀಸರು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ನ್ಯಾಯಾಧೀಶರಾದ ಎಚ್.ಎಸ್.ಮಲ್ಲಿಕಾರ್ಜುನ ಸ್ವಾಮಿ ಈ ತೀರ್ಪು ನೀಡಿದ್ದಾರೆ. ದಂಡದ ಹಣವನ್ನು ರಾಜಣ್ಣ ಪತ್ನಿಗೆ ನೀಡುವಂತೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಎಸ್.ರಾಜಣ್ಣ ವಾದ ಮಂಡಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.