ತುಮಕೂರು: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 86 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದು ಶನಿವಾರ ಆಸ್ಪತ್ರೆಯಿಂದ ಬಿಡುಗಡೆಯಾದರು. ಇಲ್ಲಿಯವರೆಗೂ ಒಟ್ಟು 917 ಸೋಂಕಿತರು ಗುಣಮುಖರಾಗಿದ್ದಾರೆ.
ಶನಿವಾರ ಮತ್ತೆ 63 ಮಂದಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1,781 ತಲುಪಿದೆ. 810 ಸಕ್ರಿಯ ಪ್ರಕರಣಗಳು ಇವೆ. ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ 2,413 ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 1,601 ಮಂದಿಯನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ.
ಕುಣಿಗಲ್, ಶಿರಾ, ಪಾವಗಡ, ತಿಪಟೂರು, ಮಧುಗಿರಿ ತಾಲ್ಲೂಕಿನಲ್ಲಿ ಸೋಂಕಿತರು ಶತಕ ದಾಟಿದ್ದಾರೆ. ತುಮಕೂರು ತಾಲ್ಲೂಕಿನಲ್ಲಿಯೇ ಗರಿಷ್ಠ 765 ಪ್ರಕರಣಗಳು ವರದಿಯಾಗಿ ಜಿಲ್ಲೆಯಲ್ಲಿ ಸೋಂಕಿನಿಂದ ಇಲ್ಲಿಯವರೆಗೆ 54 ಮಂದಿ ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.