ADVERTISEMENT

ಕೋವಿಡ್: ಒಂದೇ ದಿನ 6 ಪ್ರಕರಣ

​ಪ್ರಜಾವಾಣಿ ವಾರ್ತೆ
Published 3 ಜನವರಿ 2024, 14:27 IST
Last Updated 3 ಜನವರಿ 2024, 14:27 IST

ಪ್ರಜಾವಾಣಿ ವಾರ್ತೆ

ತುಮಕೂರು: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ನಿಧಾನವಾಗಿ ಹೆಚ್ಚಳವಾಗುತ್ತಿದ್ದು, ಒಂದೇ ದಿನ ಆರು ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ತುಮಕೂರು ಹಾಗೂ ಕುಣಿಗಲ್ ತಾಲ್ಲೂಕಿನಲ್ಲಿ ತಲಾ 2 ಪ್ರಕರಣ, ಗುಬ್ಬಿ, ಕೊರಟಗೆರೆ ತಾಲ್ಲೂಕಿನಲ್ಲಿ ತಲಾ ಒಬ್ಬರಿಗೆ ಸೋಂಕು ತಗುಲಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಹೆಚ್ಚುತ್ತಿದ್ದು, 30ಕ್ಕೆ ಏರಿಕೆಯಾಗಿದೆ. ತುಮಕೂರು ತಾಲ್ಲೂಕಿನಲ್ಲಿ 8, ಕುಣಿಗಲ್ 6, ಗುಬ್ಬಿ 5, ಕೊರಟಗೆರೆ, ಪಾವಗಡದಲ್ಲಿ ತಲಾ 4, ಶಿರಾ, ತಿಪಟೂರು, ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ತಲಾ ಒಂದು ಸಕ್ರಿಯ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.