ADVERTISEMENT

ಒಂದೇ ದಿನ 45 ಮಂದಿ ಗುಣಮುಖ

ಮತ್ತೆ 18 ಜನರಿಗೆ ಸೋಂಕು ದೃಢ

​ಪ್ರಜಾವಾಣಿ ವಾರ್ತೆ
Published 17 ಜುಲೈ 2020, 16:41 IST
Last Updated 17 ಜುಲೈ 2020, 16:41 IST

ತುಮಕೂರು: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ 45 ಮಂದಿ ಗುಣಮುಖರಾಗಿದ್ದು ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆಯಾದರು. ಅಲ್ಲದೆ ಶುಕ್ರವಾರ ಮತ್ತೆ 18 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 630ಕ್ಕೆ ಏರಿದೆ.

ಒಂದೇ ದಿನ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಸೋಂಕಿತರು ಬಿಡುಗಡೆಯಾಗಿರುವುದು ಇದೇ ಮೊದಲು. ಒಟ್ಟು 267 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನೂ 345 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿ ಇವೆ.

ತುಮಕೂರಿನಲ್ಲಿ ಗರಿಷ್ಠ ಸೋಂಕಿತರು ಇದ್ದಾರೆ. ಪಾವಗಡ, ಶಿರಾ, ಮಧುಗಿರಿಯಲ್ಲಿ ಸೋಂಕಿತರ ಸಂಖ್ಯೆ 50 ದಾಟಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ 666 ಮತ್ತು ದ್ವಿತೀಯ ಸಂಪರ್ಕಿತ 879 ಮಂದಿಯನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.