ತುಮಕೂರು: ನಗರದ ಹನುಮಂತರಪುರ ಬಡಾವಣೆಯ 66 ವರ್ಷದ ವ್ಯಕ್ತಿಯೊಬ್ಬರಿಗೆ ಕೋವಿಡ್ ರೂಪಾಂತರಿ ತಳಿ ಜೆಎನ್.1 ದೃಢಪಟ್ಟಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.
ಹೃದಯ ಸಮಸ್ಯೆಗೆ ಚಿಕಿತ್ಸೆ ಪಡೆಯಲು ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ತೆರಳಿದ್ದ ಸಮಯದಲ್ಲಿ ಕೋವಿಡ್ ದೃಢಪಟ್ಟಿದೆ. ಕಳೆದ ವಾರ ಮಧುಗಿರಿ ತಾಲ್ಲೂಕಿನ ವ್ಯಕ್ತಿಯೊಬ್ಬರು ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಹೋಗಿದ್ದ ಸಮಯದಲ್ಲಿ ಕೋವಿಡ್ ಇರುವುದು ಪತ್ತೆಯಾಗಿತ್ತು.
ಜಿಲ್ಲೆಯ ಯಾವ ಆಸ್ಪತ್ರೆಯಲ್ಲೂ ಕೋವಿಡ್ ದೃಢಪಟ್ಟಿಲ್ಲ. ಜಿಲ್ಲೆಯಲ್ಲಿ ಈವರೆಗೂ ಕೋವಿಡ್ ಪರೀಕ್ಷೆ ಆರಂಭಿಸಿಲ್ಲ. ಇನ್ನು ಒಂದೆರಡು ದಿನಗಳಲ್ಲಿ ಪರೀಕ್ಷೆ ಆರಂಭಿಸಲಾಗುವುದು. ನಂತರವಷ್ಟೇ ಮಾಹಿತಿ ಲಭ್ಯವಾಗಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುನಾಥ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.