ADVERTISEMENT

ಆಂಜನೇಯ ಚಿತ್ರ ವಿರೂಪ; ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2020, 15:31 IST
Last Updated 7 ಆಗಸ್ಟ್ 2020, 15:31 IST

ತಿಪಟೂರು: ಆಂಜನೇಯ ಚಿತ್ರ ವಿರೂಪಗೊಳಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಇಬ್ಬರು ಮುಸ್ಲಿಂ ಯುವಕರನ್ನು ನಗರ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಆಂಜನೇಯ, ಟಿಪ್ಪು ಸುಲ್ತಾನ್ ಕಾಲು ಹಿಡಿದಿರುವಂತೆ ಫೋಟೊವನ್ನು ಎಡಿಟ್ ಮಾಡಿ ಮಾಜ್‌ ಎಂಬುವರು ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಹರಿಬಿಟ್ಟಿದ್ದರು. ಇದನ್ನು ಅಬ್ರಹಾರ್ ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಪ್ರಕಟಿಸಿದ್ದರು. ಈ ಸಂಬಂಧ ಬಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT