ADVERTISEMENT

ಉರುಳಿದ ಕಾರು; ಮಗು ಸಾವು

​ಪ್ರಜಾವಾಣಿ ವಾರ್ತೆ
Published 20 ಮೇ 2020, 16:45 IST
Last Updated 20 ಮೇ 2020, 16:45 IST

ಕುಣಿಗಲ್: ರಾಷ್ಟ್ರೀಯ ಹೆದ್ದಾರಿ 75ರ ಬ್ಯಾಲದಕೆರೆ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಉರುಳಿ ಬಿದ್ದ ಕಾರಣ ತಂದೆ, ತಾಯಿ ಗಾಯಗೊಂಡಿದ್ದು, ಮಗು ಪುಣ್ಯಶ್ರೀ (3) ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಯೋಗಾನಂದ, ಪಲ್ಲವಿ ಮತ್ತು ಸಂಬಂದಿಯೊಬ್ಬರು ತಿಪಟೂರಿನಿಂದ ಬೆಂಗಳೂರಿಗೆ ಕಾರಿನಲ್ಲಿ ಹೋಗುತ್ತಿದ್ದಾಗ ಘಟನೆ ನಡೆದಿದೆ. ಗಾಯಾಳುಗಳು ಕುಣಿಗಲ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಮೃತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT