ಕುಣಿಗಲ್: ತಾಲ್ಲೂಕಿನ ಅಂಚೇಪಾಳ್ಯ ಸೇತುವೆ ಬಳಿಏ. 26ರಂದು ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಬೆಂಗಳೂರಿನ ಬನಶಂಕರಿಯ ನಿವಾಸಿ ಹುಚ್ಚೇಗೌಡ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಅಂದು ದ್ವಿಚಕ್ರವಾಹನದಲ್ಲಿ ಪ್ರಯಾಣಿಸುತ್ತಿದ್ದ ಶಿವರಾಜ್ ಮತ್ತು ಹುಚ್ಚೇಗೌಡ ಎಂಬವರಿಗೆ ಕಾರೊಂದು ಡಿಕ್ಕಿಹೊಡೆದಿತ್ತು. ಹಿಂಬದಿ ಕುಳಿತಿದ್ದ ಹುಚ್ಚೇಗೌಡ ಅವರು ತೀವ್ರ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದರು. ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಅನಾರೋಗ್ಯದಿಂದ ವ್ಯಕ್ತಿಯ ಸಾವು
ತೀವ್ರ ಅನಾರೋಗ್ಯದಿಂದ ಬಳಲಿದ್ದ ತಾಲ್ಲೂಕಿನ ಬೀರಾಗಾನಹಳ್ಳಿಯ ಅನ್ವರ್‌ಪಾಷಾ (42) ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಕುಸಿದು ಮೃತಪಟ್ಟಿದ್ದಾರೆ. ಅವರು ಅಗ್ರಹಾರದಲ್ಲಿ ವಾಸವಿದ್ದರು. ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.