ADVERTISEMENT

ಮಾಜಿ ಮೇಯರ್ ರವಿಕುಮಾರ ಹತ್ಯೆ ಪ್ರಕರಣ: ‘ಕೋಕಾ’ ಕಾಯ್ದೆಯಡಿ ದೂರು ದಾಖಲು

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2018, 16:11 IST
Last Updated 26 ಅಕ್ಟೋಬರ್ 2018, 16:11 IST

ತುಮಕೂರು: ಮಾಜಿ ಮೇಯರ್ ಹಾಗೂ ಮಹಾನಗರ ಪಾಲಿಕೆ ಸದಸ್ಯ ರವಿಕುಮಾರ್ ಹತ್ಯೆ ಪ್ರಕರಣ ಆರೋಪಿಗಳ ವಿರುದ್ಧ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ ಪ್ರಕರಣವನ್ನು(ಕೋಕಾ) ಪೊಲೀಸರು ದಾಖಲು ಮಾಡಿಕೊಂಡಿದ್ದಾರೆ.

ತುಮಕೂರು ಜಿಲ್ಲೆಯಲ್ಲೇ ಇದೇ ಪ್ರಪ್ರಥಮ ಬಾರಿಗೆ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಗುಂಪುಗೂಡಿ ಭೀಕರ ಅಪರಾಧ ಕೃತ್ಯ ನಡೆಸುವರ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಾಗುತ್ತದೆ. ಅತೀ ಗಂಭೀರ ಸ್ವರೂಪದ ಕೃತ್ಯಗಳಲ್ಲಿ ಈ ಪ್ರಕರಣವನ್ನು ಪೊಲೀಸರು ದಾಖಲಿಸುತ್ತಾರೆ.

ಮಾಜಿ ಮೇಯರ್ ರವಿಕುಮಾರ್ ಭೀಕರ ಹತ್ಯೆ ಪ್ರಕರಣ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ 9 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಕೆಲ ಆರೋಪಿಗಳ ಬಂಧನಕ್ಕೆ ಜಾಲ ಬೀಸಿದ್ದಾರೆ. ಈಗಾಗಲೇ ಬಂಧಿತ ಆರೋಪಿಗಳು ಕೋಕಾ ಕಾಯ್ದೆಯಡಿ ಪ್ರಕರಣ ವ್ಯಾಪ್ತಿಯಡಿ ವಿಚಾರಣೆ ಎದುರಿಸಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.