ADVERTISEMENT

ಮೊಬೈಲ್‌ ಬಳಕೆಯಿಂದ ಅಪರಾಧ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2025, 5:28 IST
Last Updated 12 ಅಕ್ಟೋಬರ್ 2025, 5:28 IST
ತುಮಕೂರಿನಲ್ಲಿ ಶುಕ್ರವಾರ ವರದಕ್ಷಿಣೆ ವಿರೋಧಿ ವೇದಿಕೆಯಿಂದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಪ್ರಯುಕ್ತ ಮಾನಸಿಕ ಅರಿವು ಕುರಿತ ಸಂವಾದ ಏರ್ಪಡಿಸಲಾಗಿತ್ತು. ಮನೋವೈದ್ಯ ಲೋಕೇಶ್‌ಬಾಬು, ಕಲಾ ಕಾಲೇಜು ಪ್ರಾಂಶುಪಾಲರಾದ ಜಿ.ದಾಕ್ಷಾಯಿಣಿ, ಪ್ರಾಧ್ಯಾಪಕ ಬಿ.ಕರಿಯಣ್ಣ, ಲೇಖಕಿ ಬಾ.ಹ.ರಮಾಕುಮಾರಿ, ವೇದಿಕೆ ಅಧ್ಯಕ್ಷೆ ಎಂ.ಸಿ.ಲಲಿತಾ ಇತರರು ಹಾಜರಿದ್ದರು

ತುಮಕೂರು: ಅತಿಯಾದ ಮೊಬೈಲ್‌ ಬಳಕೆಯಿಂದ ಅಪರಾಧ ಚಟುವಟಿಕೆಗಳಲ್ಲಿ ಸಿಲುಕುವುದು ಹೆಚ್ಚಾಗುತ್ತಿದೆ ಎಂದು ಮನೋವೈದ್ಯ ಲೋಕೇಶ್‌ಬಾಬು ಆತಂಕ ವ್ಯಕ್ತಪಡಿಸಿದರು.

ನಗರದ ಕಲಾ ಕಾಲೇಜಿನ ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ಶುಕ್ರವಾರ ವರದಕ್ಷಿಣೆ ವಿರೋಧಿ ವೇದಿಕೆ, ಸಾಂತ್ವನ ಕೇಂದ್ರದಿಂದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಮಾನಸಿಕ ಅರಿವು ಕುರಿತ ಸಂವಾದದಲ್ಲಿ ಮಾತನಾಡಿದರು.

ಮೊಬೈಲ್‍ನ ಅತಿಯಾದ ಬಳಕೆ ಅನಾಹುತ, ಅಪರಾಧ ಚಟುವಟಿಕೆಗಳಿಗೆ ಆಹ್ವಾನಿಸುತ್ತದೆ. ವಿದ್ಯಾರ್ಥಿ ಸಮೂಹ ಎಚ್ಚರಿಕೆ ವಹಿಸಬೇಕು. ಮೊಬೈಲ್‌ ಬಳಕೆ ಮನುಷ್ಯರನ್ನು ದಡ್ಡರನ್ನಾಗಿಸುತ್ತಿದೆ. ಎಲ್ಲವನ್ನು ಮೊಬೈಲ್‌ನಲ್ಲಿ ನೋಡುತ್ತಾ ವ್ಯಸನಿಗಳಾಗುತ್ತಿದ್ದಾರೆ. ಇದೊಂದು ಮಾನಸಿಕ ಅನಾರೋಗ್ಯ ಎಂದರು.

ADVERTISEMENT

ಕಲಾ ಕಾಲೇಜು ಪ್ರಾಂಶುಪಾಲರಾದ ಜಿ.ದಾಕ್ಷಾಯಿಣಿ, ಪ್ರಾಧ್ಯಾಪಕ ಬಿ.ಕರಿಯಣ್ಣ, ಲೇಖಕಿ ಬಾ.ಹ.ರಮಾಕುಮಾರಿ, ವರದಕ್ಷಿಣೆ ವಿರೋಧಿ ವೇದಿಕೆ ಅಧ್ಯಕ್ಷೆ ಎಂ.ಸಿ.ಲಲಿತಾ, ಪ್ರಧಾನ ಕಾರ್ಯದರ್ಶಿ ಸಾ.ಚಿ.ರಾಜಕುಮಾರ್‌, ಸಾಂತ್ವನ ಕೇಂದ್ರದ ಪಾರ್ವತಮ್ಮ ಇತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.