ADVERTISEMENT

ತುಮಕೂರು: ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ

​ಪ್ರಜಾವಾಣಿ ವಾರ್ತೆ
Published 16 ಜನವರಿ 2021, 6:43 IST
Last Updated 16 ಜನವರಿ 2021, 6:43 IST
ಕೊಲೆಯಾದ ಪ್ರಸಾದ್
ಕೊಲೆಯಾದ ಪ್ರಸಾದ್   

ತುಮಕೂರು: ನಗರದ ಹೊರವಲಯದ ರಿಂಗ್ ರಸ್ತೆಯಲ್ಲಿ ಪ್ರಸಾದ್ (40) ಎಂಬುವವರ ತಲೆ ಮೇಲೆ ಕಲ್ಲು ಎತ್ತಿಹಾಕಿ ಶುಕ್ರವಾರ ರಾತ್ರಿ ಕೊಲೆ ಮಾಡಲಾಗಿದೆ.

ಮದ್ಯಪಾನ ಮಾಡಿದ ನಂತರ ಬಾರ್ ಮುಂದೆ ಈತ ನಿಂತಿದ್ದ. ಈ ವೇಳೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಹಲ್ಲೆ ನಡೆಸಿ, ಕೆಳಗೆ ಬಿದ್ದ ಪ್ರಸಾದ್ ತಲೆ ಮೇಲೆ ಕಲ್ಲು ಎತ್ತಿ ಹಾಕಿದ್ದಾರೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಡಿವೈಎಸ್ಪಿ ತಿಪ್ಪೇಸ್ವಾಮಿ ಭೇಟಿ ಪರಿಶೀಲನೆ ನಡೆಸಿದರು. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.