ಚಿಕ್ಕನಾಯಕನಹಳ್ಳಿ: ವೇತನ ತಡೆಹಿಡಿದಿದ್ದಾರೆ ಎನ್ನುವ ಕಾರಣಕ್ಕೆ ಪಟ್ಟಣದ ವಲಯ ಅರಣ್ಯಾಧಿಕಾರಿ ಕಚೇರಿಯ ‘ಡಿ’ ಗ್ರೂಪ್ ನೌಕರ ರವಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ವೇತನ ನೀಡಿಲ್ಲ ಎಂದು ಆರೋಪಿಸಿದ ರವಿ ಮದ್ಯಸೇವಿಸಿ ಕಚೇರಿ ಮುಂದೆ ಬುಧವಾರ ಧರಣಿ ಕುಳಿತಿದ್ದ. ಮದ್ಯದ ಅಮಲಿನಲ್ಲಿದ್ದ ಆತ ಮಧ್ಯಾಹ್ನ ವಿಷ ಸೇವಿಸಿದ್ದಾನೆ ಎನ್ನಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
‘ಮದ್ಯ ವ್ಯಸನಿಯಾಗಿದ್ದ ಈತ ನಿತ್ಯ ಕಚೇರಿಗೆ ಕುಡಿದು ಬರುತ್ತಿದ್ದ. ಶಿಕ್ಷೆಯ ರೂಪದಲ್ಲಿ ಆತನ ವೇತನ ತಡೆಹಿಡಿಯಲಾಗಿತ್ತು. ಜಿಲ್ಲಾಸ್ಪತ್ರೆಯಲ್ಲಿರುವ ಆತನನ್ನು ನಮ್ಮ ಅಧಿಕಾರಿಗಳು ನೋಡಿಕೊಂಡು ಬಂದಿದ್ದಾರೆ’ ಎಂದು ತಿಪಟೂರಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರತಿಕ್ರಿಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.