ADVERTISEMENT

ಸಾಲದ ಮೇಲಿನ ಬಡ್ಡಿ ಮನ್ನಾಗೆ ಡಿಕೆಶಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2020, 19:43 IST
Last Updated 19 ಮಾರ್ಚ್ 2020, 19:43 IST
ಡಿ. ಕೆ. ಶಿವಕುಮಾರ್
ಡಿ. ಕೆ. ಶಿವಕುಮಾರ್   

ತುಮಕೂರು: ಕೊರೊನಾ ಭೀತಿಯಿಂದ ವ್ಯಾಪಾರ, ವಹಿವಾಟು ಇಲ್ಲದೇ ಜನರು ಸಂಕಷ್ಟಕ್ಕೆ ಸಿಲುಕಿದ್ದು, ಬ್ಯಾಂಕ್ ಗ್ರಾಹಕರ ಸಾಲದ ಮೇಲಿನ ಒಂದು ತಿಂಗಳ ಬಡ್ಡಿಯನ್ನು ಮನ್ನಾ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಲ್ಲಿ ಗುರುವಾರ ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ಎಲ್ಲ ರೀತಿಯ ವಹಿವಾಟಿಗೆ ಈಗ ನೀಡಿರುವ 15 ದಿನಗಳ ರಜೆ ಒಂದು ತಿಂಗಳು ಆಗಬಹುದು. ಈಗಾಗಲೇ ಸಾರ್ವಜನಿಕರು ಹಣವಿಲ್ಲದೇ ಪರದಾಡುತ್ತಿದ್ದಾರೆ. ಹಾಗಾಗಿ ಕೇಂದ್ರ, ರಾಜ್ಯ ಸರ್ಕಾರಗಳು ಒಂದು ತಿಂಗಳ ಬಡ್ಡಿ ಮನ್ನಾ ಮಾಡಬೇಕು. ಸಾಲದ ಕಂತು ಪಾವತಿ ಅವಧಿಯನ್ನು ಮುಂದೂಡಬೇಕು’ ಎಂದು ಒತ್ತಾಯಿಸಿದರು.

‘ಜನರು ಕೊರೊನಾ ಭೀತಿಯಿಂದ ಆತಂಕಕ್ಕೀಡಾಗಿದ್ದು, ಇಂತಹ ಸಂದರ್ಭದಲ್ಲಿ ಯಾವುದೇ ರಾಜಕಾರಣ ಮಾಡುವುದಿಲ್ಲ. ಜನರನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಕೈಜೋಡಿಸುತ್ತೇವೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.