ADVERTISEMENT

ಡಿ.11 ಕ್ಕೆ ಬೆಳಗಾವಿಯಲ್ಲಿ ಕರಾಳ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2018, 16:00 IST
Last Updated 8 ಡಿಸೆಂಬರ್ 2018, 16:00 IST
ಸತ್ಯಪ್ಪ
ಸತ್ಯಪ್ಪ   

ತುಮಕೂರು: ಸದಾಶಿವ ಆಯೋಗದ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಒತ್ತಾಯಿಸಿ ಡಿ.11 ರಂದು ಬೆಳಗಾವಿ ಮಹಾನಗರಪಾಲಿಕೆ ಬಳಿಯ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಕರಾಳ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಮಾದಿಗ ಮೀಸಲಾತಿ ಸಮಿತಿ ಹೋರಾಟ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಸತ್ಯಪ್ಪ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ನೂರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದು ರಾಜ್ಯದ ವಿವಿಧ ಭಾಗಗಳಿಂದ ಸಮುದಾಯದ ಮುಖಂಡರು ಭಾಗವಹಿಸುವರು ಎಂದರು.

ರಾಜ್ಯದಲ್ಲಿ ಸಮುದಾಯದ 1 ಕೋಟಿ ಜನರು ಇದ್ದಾರೆ. ಜನಸಂಖ್ಯೆ ಆಧಾರಿತ ಮೀಸಲಾತಿಗಾಗಿ ಬಹಳ ಹಿಂದಿನಿಂದಲೂ ಹೋರಾಟ ಮಾಡಿಕೊಂಡು ಬಂದಿದ್ದೇವೆ. ಆದರೆ ರಾಜ್ಯದ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಇದಕ್ಕೆ ಸ್ಪಂದಿಸುತ್ತಿಲ್ಲ. ಆದ ಕಾರಣ ಈ ಮೂರು ಪಕ್ಷಗಳಿಗೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲು ನಿರ್ಧರಿಸಲಾಗಿದೆ ಎಂದು ಎಚ್ಚರಿಸಿದರು.

ADVERTISEMENT

ಸಮುದಾಯದ ಪ್ರತಿ ಕುಟುಂಬಕ್ಕೆ 5 ಎಕರೆ ಕೃಷಿ ಭೂಮಿ ಮಂಜೂರು ಮಾಡುವುದು, ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ ₹ 1 ಸಾವಿರ ಕೋಟಿ ಅನುದಾನ ಮಂಜೂರು ಮಾಡಿ ಸಿದ್ದರಬೆಟ್ಟದಲ್ಲಿ ಶಿವಶರಣರ ಅಧ್ಯಯನ ಪೀಠ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಮಾಹಿತಿ ನೀಡಿದರು.

ಸಮಿತಿ ಜಿಲ್ಲಾ ಘಟಕದ ಉಪಾಧ್ಯಕ್ಷ ಗೋವಿಂದಸ್ವಾಮಿ,ಗೌರವಾಧ್ಯಕ್ಷ ಸಿದ್ಧಗಂಗಪ್ಪ, ಮುಖಂಡರಾದ ಚಿಕ್ಕಣ್ಣ ಹಾಗೂ ಕೆ.ಅಭಿಷೇಕ್ ಗೋಷ್ಠಿಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.