ತುಮಕೂರು: ತುಮಕೂರು ಡಿಸಿಸಿ ಬ್ಯಾಂಕ್ ಆಡಳಿತಾಧಿಕಾರಿಯಾಗಿ ಸಹಕಾರ ಇಲಾಖೆ ಜಂಟಿ ನಿರ್ದೇಶಕರಾದ ನರಸಿಂಹಮೂರ್ತಿ ಗುರುವಾರ ಅಧಿಕಾರ ಸ್ವೀಕರಿಸಿದರು. ಈವರೆಗೆ ಕೆ.ಎನ್.ರಾಜಣ್ಣ ಬ್ಯಾಂಕ್ ಅಧ್ಯಕ್ಷರಾಗಿದ್ದರು.
ಸಹಕಾರ ಸಂಘಗಳು ಮತ್ತು ಸಹಕಾರ ಬ್ಯಾಂಕ್‌ಗಳ ಚುನಾವಣೆಯನ್ನು ಡಿಸೆಂಬರ್‌ವರೆಗೆ ಮುಂದೂಡಲಾಗಿದೆ. ಈ ಸಂಬಂಧ ಸಹಕಾರ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಆಡಳಿತ ಮಂಡಳಿಗಳ ಅವಧಿ ಮುಕ್ತಾಯವಾಗಿದ್ದರೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡುವಂತೆ ಸೂಚಿಸಿತ್ತು. ಕೋವಿಡ್–19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ.
ನರಸಿಂಹಮೂರ್ತಿ ಆರು ತಿಂಗಳ ಕಾಲ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುವರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.