ADVERTISEMENT

ಮಮತಾಗೂ ನಮ್ಮ ರಾಜ್ಯಕ್ಕೂ ಏನು ಸಂಬಂಧ: ಡಿಸಿಎಂ ಸವದಿ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2019, 15:07 IST
Last Updated 27 ಡಿಸೆಂಬರ್ 2019, 15:07 IST
   

ತುಮಕೂರು: ಮಂಗಳೂರು ಗೋಲಿಬಾರ್‌ನಲ್ಲಿ‌ ಸಾವನ್ನಪ್ಪಿದವರಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಪರಿಹಾರ ನೀಡುವ ಮೂಲಕ ಗಲಭೆ ಕೋರರನ್ನು ಪ್ರಚೋಧಿಸುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಆರೋಪಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೂ ಕರ್ನಾಟಕಕ್ಕೂ ಏನು ಸಂಬಂಧ? ಅವರು ಪರಿಹಾರ ನೀಡುವ ಮೂಲಕ ಇಲ್ಲಿನ ಜನರು ಗಲಭೆ ಮಾಡಿಕೊಂಡು ಸತ್ತರೂ ಪರಿಹಾರ ಕೊಡುತ್ತೀವಿ ಎಂದು ಪ್ರಚೋದಿಸುತ್ತಿದ್ದಾರೆ. ಇದರಿಂದ ಕೋಮುಗಲಭೆ ಎಬ್ಬಿಸಲು ವಿರೋಧ ಪಕ್ಷಗಳು ಹುನ್ನಾರ ಮಾಡುತ್ತಿವೆ ಎಂಬುದು ಸ್ಪಷ್ಟವಾಗಿದೆ’ ಎಂದರು.

ಪೌರತ್ವ ಕಾಯ್ದೆ ಬಗ್ಗೆ ಇಡೀ ದೇಶಕ್ಕೆ ಗೊತ್ತಿದೆ. ಇದಕ್ಕೆ ಜನರ ಬೆಂಬಲವೂ ಇದೆ. ಆದರೆ, ವಿಪಕ್ಷಗಳು ಜನರನ್ನು ತಪ್ಪು ದಾರಿಗೆಳೆದು ಪ್ರಚೋದಿಸಿ ಪ್ರತಿಭಟನೆ ಮಾಡಿಸುತ್ತಿವೆ ಎಂದು ಆರೋಪಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.