ಸಾವು
(ಪ್ರಾತಿನಿಧಿಕ ಚಿತ್ರ)
ಪ್ರಜಾವಾಣಿ ವಾರ್ತೆ
ಶಿರಾ: ನಗರದ ಭವಾನಮ್ಮ ದೇವಸ್ಥಾನದ ಮುಂಭಾಗದಲ್ಲಿರುವ ಚಿಕ್ಕ ಕೆರೆಯಲ್ಲಿ ಪುರುಷನ ಶವ ಸೋಮವಾರ ಪತ್ತೆಯಾಗಿದೆ.
ಮೃತರ ವಿಳಾಸ ಮತ್ತು ವಾರಸುದಾರ ಪತ್ತೆಯಾಗಿಲ್ಲ. ಸುಮಾರು 35ರಿಂದ 40 ವರ್ಷ ವಯಸ್ಸಿನ, ಸುಮಾರು 5.5 ಅಡಿ ಎತ್ತರವಿದ್ದು, ದುಂಡು ಮುಖ, ದೃಢಕಾಯ ಶರೀರ ಹೊಂದಿದ್ದು ಮೈ ಮೇಲೆ ನೀಲಿ ಬಿಳಿ ಗೆರೆಯುಳ್ಳ ಅರ್ಧ ತೋಳಿನ ಅಂಗಿ, ಕಂದು ಬಣ್ಣದ ಪ್ಯಾಂಟ್ ಧರಿಸಿದ್ದಾರೆ.
ವ್ಯಕ್ತಿ ವಾರದ ಹಿಂದೆ ನೀರಿನಲ್ಲಿ ಆಕಸ್ಮಿಕವಾಗಿ ಅಥವಾ ಬೇರೆ ಕಾರಣದಿಂದ ನೀರಿನಲ್ಲಿ ಮೃತಪಟ್ಟಿರುವಂತೆ ಕಂಡು ಬರುತ್ತಿದೆ. ಇವರ ಬಗ್ಗೆ ಮಾಹಿತಿ ದೊರೆತರೆ ಶಿರಾ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಬಹುದು.
ಅಪಘಾತ: ಅಪರಿಚಿತ ವ್ಯಕ್ತಿ ಸಾವು
ರಾಷ್ಟ್ರೀಯ ಹೆದ್ದಾರಿ 48ರ ಶಿರಾ ನಗರದ ಎಚ್.ಪಿ ಪೆಟ್ರೋಲ್ ಬಂಕ್ ಬಳಿ ರಸ್ತೆಯಲ್ಲಿ ನಿಂತಿದ್ದ ಅಥವಾ ರಸ್ತೆ ದಾಟುತ್ತಿದ್ದ ಸುಮಾರು 55ರಿಂದ 60 ವರ್ಷದ ಅಪರಿಚಿತ ವ್ಯಕ್ತಿಗೆ ವಾಹನ ಡಿಕ್ಕಿ ಹೊಡೆದು ವಾಹನ ನಿಲ್ಲಿಸದೆ ಹೊರಟು ಹೋಗಿದೆ. ಶಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.