ADVERTISEMENT

ಮಹಡಿಯಿಂದ ಬಿದ್ದು ಸಾವು

​ಪ್ರಜಾವಾಣಿ ವಾರ್ತೆ
Published 9 ಜನವರಿ 2021, 4:12 IST
Last Updated 9 ಜನವರಿ 2021, 4:12 IST
ಮಧುಬಿಂದು
ಮಧುಬಿಂದು   

ಚಿಕ್ಕನಾಯಕನಹಳ್ಳಿ: ಮನೆಯ ಮಹಡಿ ಮೇಲೆ ಆಟವಾಡುತ್ತಿರುವಾಗ ಆಯತಪ್ಪಿ ಬಿದ್ದು ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಪಟ್ಟಣದಲ್ಲಿ ಶುಕ್ರವಾರ ಸಂಜೆ ನಡೆದಿದೆ.

9ನೇ ತರಗತಿ ವಿದ್ಯಾರ್ಥಿನಿ ಮಧುಬಿಂದು(15)ಪಟ್ಟಣದ ಕುಣಿಗಲ್‌ ರಸ್ತೆಯಲ್ಲಿರುವ ತಮ್ಮ ಮನೆಯ ಮಹಡಿ ಮೇಲೆ ಆಟವಾಡುತ್ತಿದ್ದರು. ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಬಿದ್ದಿರುವ ರಭಸಕ್ಕೆ ಕಾಂಪೌಂಡ್‌ನ ಕಬ್ಬಿಣದ ಸರಳುಗಳು ಹೊಟ್ಟೆ ಹಾಗೂ ಎದೆಯ ಭಾಗಕ್ಕೆ ಹೊಕ್ಕಿವೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯ ಲಾಗಿದೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಮಧುಬಿಂದು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಶಿರಸ್ತೆದಾರ್ ಆಗಿರುವ ರವಿಕುಮಾರ್ ಅವರ ಮಗಳು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.