ತಿಪಟೂರು: ಕೃಷಿ ಉತ್ಪನ್ನ ಮಾರುಕಟ್ಟೆಯ ಅಧ್ಯಕ್ಷ ಮಡೆನೂರು ಲಿಂಗರಾಜು (54) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾದರು.
ತಾಲ್ಲೂಕಿನ ಮಡೆನೂರು ಗ್ರಾಮದ ಲಿಂಗರಾಜು ಅವರು ಹಲವಾರು ವರ್ಷಗಳಿಂದ ರಾಜಕಾರಣದಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದರು. ಹಿಂದೆ ಪ್ರಾಥಮಿಕ ಸಹಕಾರ ಸಂಘದಲ್ಲಿಯೂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಮೃತರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಅಂತ್ಯಕ್ರಿಯೆ ಮಡೆನೂರಿನ ತೋಟದಲ್ಲಿ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.