ತುಮಕೂರು: ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ ಹೋಬಳಿಯ ತಿಂಗಳೂರು ಗ್ರಾಮದ ಕೆರೆಯಲ್ಲಿ ಕುರಿಗಳ ಮೈ ತೊಳೆಯಲು ಹೋಗಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ತಿಮ್ಮಯ್ಯ (62) ಎಂಬುವರು ಸೋಮವಾರ ಮೃತಪಟ್ಟಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಬಂದ ಗ್ರಾಮಸ್ಥರು ಕೆಲ ಗಂಟೆಗಳ ಕಾಲ ನೀರಿನಲ್ಲಿ ಶೋಧ ನಡೆಸಿದರೂ ಶವ ಪತ್ತೆಯಾಲಿಲ್ಲ. ಮಧುಗಿರಿಯಿಂದ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಶವ ಹೊರ ತೆಗೆದರು. ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.