ADVERTISEMENT

ಪ್ರಜಾವಾಣಿ ವರದಿ ಪರಿಣಾಮ | ಲಸಿಕೆ ಪಡೆದುಕೊಂಡಿದ್ದ ಮಕ್ಕಳ ಸಾವಿನ ತನಿಖೆಗೆ ಆದೇಶ

​ಪ್ರಜಾವಾಣಿ ವಾರ್ತೆ
Published 7 ಜನವರಿ 2025, 4:21 IST
Last Updated 7 ಜನವರಿ 2025, 4:21 IST
<div class="paragraphs"><p>ಮಗು (ಪ್ರಾತಿನಿಧಿಕ ಚಿತ್ರ)</p></div>

ಮಗು (ಪ್ರಾತಿನಿಧಿಕ ಚಿತ್ರ)

   

ಕುಣಿಗಲ್: ತಾಲ್ಲೂಕಿನಲ್ಲಿ ಪೆಂಟಾವಲೆಂಟ್ ಲಸಿಕೆ ಪಡೆದುಕೊಂಡಿದ್ದ ಎರಡು ಮಕ್ಕಳು ಸಾವನ್ನಪ್ಪಿದ್ದು, ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಆದೇಶಿಸಿದೆ.

ಲಸಿಕೆ ಪಡೆದುಕೊಂಡಿದ್ದ ಇಬ್ಬರು ಮಕ್ಕಳು ಸಾವನ್ನಪ್ಪಿದ ಬಗ್ಗೆ ‘ಪ್ರಜಾವಾಣಿ’ಯಲ್ಲಿ ಜ. 6ರಂದು ವರದಿ ಪ್ರಕಟವಾಗಿತ್ತು. ಈ ವರದಿ ಆಧಾರದ ಮೇಲೆ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಎಚ್ಚರಿಕೆ ನೀಡಿದೆ.

ADVERTISEMENT

ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಕೈಗೊಂಡ ಕ್ರಮದ ವರದಿಯನ್ನು ಒಂದು ವಾರದಲ್ಲಿ ಆಯೋಗಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.