ADVERTISEMENT

ಶಿರಾ|ಸಾಲಭಾದೆ: ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 8 ಜೂನ್ 2025, 4:52 IST
Last Updated 8 ಜೂನ್ 2025, 4:52 IST
ಜಯರಾಮಯ್ಯ
ಜಯರಾಮಯ್ಯ   

ಶಿರಾ: ತಾಲ್ಲೂಕಿನ ಬಂದಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋವಿಂದನಹಳ್ಳಿ ಗ್ರಾಮದಲ್ಲಿ ಶನಿವಾರ ರೈತ ಜಯರಾಮಯ್ಯ (68) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರೈತ ಜಯರಾಮಯ್ಯ ಹಲವರ ಬಳಿ ಸಾಲ ಮಾಡಿಕೊಂಡಿದ್ದು, ಎರಡು ಎಕರೆ ಜಮೀನಿನಲ್ಲಿ ಇದ್ದ ಅಡಿಕೆ ತೋಟ ನೀರಿಲ್ಲದೆ ಒಣಗುತ್ತಿತ್ತು. ಪಿಎಲ್‌ಡಿ ಬ್ಯಾಂಕ್‌ನಲ್ಲಿ ₹50 ಸಾವಿರ ಸಾಲ ಮಾಡಿದ್ದು, ಬ್ಯಾಂಕ್ ನವರ ಒತ್ತಡ ಮಾಡುತ್ತಿದ್ದ ಕಾರಣ ಬೇರೆಯವರ ಹತ್ತಿರ ಕೈ ಸಾಲ ಮಾಡಿ ಇತ್ತೀಚೆಗೆ ಸಾಲ ತೀರಿಸಿದ್ದರು.

ಸಾಲಭಾದೆ ಜೊತೆಗೆ ಜೀವನದಲ್ಲಿ ಜಿಗುಪ್ಪೆಗೊಂಡು ಶನಿವಾರ ತನ್ನ ಜಮೀನಿನಲ್ಲಿ ಇದ್ದ ಹುಣಸೆಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ADVERTISEMENT

ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.