ADVERTISEMENT

‘ಕೈ' ಯಾತ್ರೆಯಲ್ಲಿ ಪಾಲ್ಗೊಳ್ಳುವ ನಿರ್ಧಾರ ತೆಗೆದುಕೊಂಡಿಲ್ಲ: ಶ್ರೀನಿವಾಸ್

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2022, 16:31 IST
Last Updated 26 ಸೆಪ್ಟೆಂಬರ್ 2022, 16:31 IST
ಗುಬ್ಬಿ ತಾಲ್ಲೂಕಿನ ಬಿದರೆ ಗ್ರಾಮ ಪಂಚಾಯಿತಿಯಲ್ಲಿ ಡಿಜಿಟಲ್ ಗ್ರಂಥಾಲಯ ಉದ್ಘಾಟಿಸಿದ ಶಾಸಕ ಎಸ್.ಆರ್. ಶ್ರೀನಿವಾಸ್
ಗುಬ್ಬಿ ತಾಲ್ಲೂಕಿನ ಬಿದರೆ ಗ್ರಾಮ ಪಂಚಾಯಿತಿಯಲ್ಲಿ ಡಿಜಿಟಲ್ ಗ್ರಂಥಾಲಯ ಉದ್ಘಾಟಿಸಿದ ಶಾಸಕ ಎಸ್.ಆರ್. ಶ್ರೀನಿವಾಸ್   

ಗುಬ್ಬಿ: ‘ಕಾಂಗ್ರೆಸ್ ಪಕ್ಷದ ಭಾರತ್ ಜೋಡೊ ಯಾತ್ರೆಯಲ್ಲಿಭಾಗವಹಿಸುವ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ’ ಎಂದು ಶಾಸಕ ಎಸ್.ಆರ್. ಶ್ರೀನಿವಾಸ್ತಿಳಿಸಿದರು.

ತಾಲ್ಲೂಕಿನ ಬಿದರೆ ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ಡಿಜಿಟಲ್ ಗ್ರಂಥಾಲಯ ಉದ್ಘಾಟಿಸಿ ಅವರು ಮಾತನಾಡಿದರು.

‘ಭಾರತ್‌ ಜೋಡೊ ಯಾತ್ರೆಯಲ್ಲಿ ರಾಷ್ಟ್ರ ನಾಯಕರು ಬರುತ್ತಿರುವುದರಿಂದ ಶಾಸಕನಾಗಿ ಅವರನ್ನು ಸ್ವಾಗತಿಸುತ್ತೇನೆ ಎಂದ ಅವರು, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಪಾದಯಾತ್ರೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ’ ಎಂದು ಸ್ಪಷ್ಟಪಡಿಸಿದರು.

ADVERTISEMENT

‘ಡಿ.ಕೆ. ಸುರೇಶ್ ನಮ್ಮ ಸಂಬಂಧಿಕರು. ಹಾಗಾಗಿ, ನನ್ನ ಪತ್ನಿ ಹಾಗೂ ಮಗ ಅವರ ಜೊತೆ ಕಾಣಿಸಿಕೊಂಡಿದ್ದಾರೆ.ಇದರಲ್ಲಿ ಯಾವುದೇ ರಾಜಕೀಯವಿಲ್ಲ. ಅಧಿಕಾರಕ್ಕಿಂತ ತಾಲ್ಲೂಕಿನ ಅಭಿವೃದ್ಧಿ ಮುಖ್ಯ. ಕಾರ್ಯಕರ್ತರು ಹಾಗೂ ಮುಖಂಡರ ಜೊತೆ ಚರ್ಚಿಸಿ ಡಿಸೆಂಬರ್ ವೇಳೆಗೆ ನಿರ್ಧಾರ ಪ್ರಕಟಿಸುತ್ತೇನೆ’ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಹಾಲಕ್ಷ್ಮಿ, ಉಪಾಧ್ಯಕ್ಷ ಯತೀಶ್ ಹಾಗೂ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರು, ಮುಖಂಡರು ಹಾಗೂ ಕಾರ್ಯಕರ್ತರು
ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.