ADVERTISEMENT

ದೆಹಲಿ ಸ್ಫೋಟ: ತುಮಕೂರಿನಲ್ಲೂ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2025, 0:32 IST
Last Updated 14 ನವೆಂಬರ್ 2025, 0:32 IST
ದೆಹಲಿ ಸ್ಫೋಟ
ದೆಹಲಿ ಸ್ಫೋಟ   

ತುಮಕೂರು: ನವದೆಹಲಿಯಲ್ಲಿ ಸಂಭವಿಸಿದ ಕಾರು ಸ್ಫೋಟದ ಹಿನ್ನೆಲೆಯಲ್ಲಿ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ವ್ಯಕ್ತಿಯೊಬ್ಬನ ವಿಚಾರಣೆಯನ್ನು ಪೊಲೀಸರು ನಡೆಸಿದ್ದಾರೆ.

ನಗರದ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪಿ.ಎಚ್.ಕಾಲೊನಿ ನಿವಾಸಿ ಮುಜಾಯುದ್ದೀನ್ ಎಂಬಾತನನ್ನು ಪೊಲೀಸರು ವಿಚಾರಣೆ ನಡೆಸಿದರು. ದೆಹಲಿ ಬಾಂಬ್ ಸ್ಫೋಟಕ್ಕೂ, ಈತನಿಗೂ ಯಾವುದೇ ಸಂಬಂಧ ಇಲ್ಲದ ಕಾರಣಕ್ಕೆ ವಿಚಾರಣೆ ನಂತರ ಬಿಟ್ಟು ಕಳುಹಿಸಿದ್ದಾರೆ.

ಕಲಿಫತ್ ಉಗ್ರ ಸಂಘಟನೆಯೊಂದಿಗೆ ಮುಜಾಯುದ್ದೀನ್ ಗುರುತಿಸಿಕೊಂಡಿದ್ದ. ನಗರದಲ್ಲಿ ಸಭೆ ನಡೆಸಲು ಅವಕಾಶ ಮಾಡಿಕೊಟ್ಟಿದ್ದ. ಈ ಬಗ್ಗೆ ವಿಚಾರಣೆ ನಡೆಸಿದ್ದ ಎನ್‌ಐಎ ತಂಡ ಆತನನ್ನು ಬಂಧಿಸಿ ತಿಹಾರ್ ಜೈಲಿಗೆ ಕಳುಹಿಸಿತ್ತು. ಆರು ತಿಂಗಳು ಶಿಕ್ಷೆ ಅನುಭವಿಸಿ ಹೊರ ಬಂದಿದ್ದ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.