ADVERTISEMENT

ಅಂಬೇಡ್ಕರ್ ಪುತ್ಥಳಿ ನಿರ್ಮಾಣ ಅನುಮತಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 7 ಜನವರಿ 2026, 6:05 IST
Last Updated 7 ಜನವರಿ 2026, 6:05 IST
ಮಧುಗಿರಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಪರಿಶಿಷ್ಟರ ಕುಂದುಕೊರತೆ ಸಭೆ ನಡೆಯಿತು
ಮಧುಗಿರಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಪರಿಶಿಷ್ಟರ ಕುಂದುಕೊರತೆ ಸಭೆ ನಡೆಯಿತು   

ಮಧುಗಿರಿ: ಪಾವಗಡದಲ್ಲಿ ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಅನುಮತಿ ನೀಡಲು ಅಧಿಕಾರಿಗಳು ಸುಪ್ರೀಂಕೋರ್ಟ್ ಮೇಲೆ ಹೇಳುತ್ತಾರೆ. ಆದರೆ ಚಲನಚಿತ್ರ ನಟರ ಪುತ್ಥಳಿ ನಿರ್ಮಾಣಕ್ಕೆ ಎಲ್ಲಿಂದ ಅನುಮತಿ ನೀಡಿದ್ದಾರೆ. ತಕ್ಷಣ ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಅನುಮತಿ ನೀಡಬೇಕು ಎಂದು ದಲಿತ ಮುಖಂಡರು ಒತ್ತಾಯಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಉಪವಿಭಾಗ ಮಟ್ಟದ ಪರಿಶಿಷ್ಟರ ಕುಂದುಕೊರತೆ ಸಭೆಯಲ್ಲಿ ಮಾತನಾಡಿದರು.

ಉಪವಿಭಾಗಾಧಿಕಾರಿ ಗೊಟೂರು ಶಿವಪ್ಪ ಪ್ರತಿಕ್ರಿಯಿಸಿ, ತಿಂಗಳೊಳಗಾಗಿ ಪುತ್ಥಳಿ ನಿರ್ಮಾಣಕ್ಕೆ ಅನುಮತಿ ನೀಡಲಾಗುವುದು ಎಂದು ಸಭೆಗೆ ತಿಳಿಸಿದರು.

ADVERTISEMENT

ಕೊರಟಗೆರೆ ತಾಲ್ಲೂಕಿನ ನೇಗಲಾಲ ಗ್ರಾಮದ ದೇವಾಲಯದಲ್ಲಿ ಅಸ್ಪೃಶ್ಯತೆ ಹೋಗಲಾಡಿಸಬೇಕು. ಬಹುತೇಕ ಗ್ರಾಮಗಳಲ್ಲಿ ದಲಿತ ಸಮುದಾಯ ಸ್ಮಶಾನ ಕೊರತೆ, ಮನೆ– ನಿವೇಶನ ಕೊರತೆ ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಆದ್ಯತೆ ಮೇರೆಗೆ ಪರಿಹಾರ ನೀಡಬೇಕು. ಮಧುಗಿರಿ ತಾಲ್ಲೂಕು ಸಿದ್ದಾಪುರ ಗ್ರಾಮದಲ್ಲಿ ದಲಿತರಿಗೆ ಪ್ರತ್ಯೇಕ ರುದ್ರಭೂಮಿಗೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ತಾಲ್ಲೂಕಿನಲ್ಲಿ ಅಂಬೇಡ್ಕರ್, ಬಾಬು ಜಗಜೀವನ್ ರಾಂ, ವಾಲ್ಮೀಕಿ ಭವನಗಳಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು ಹಾಗೂ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.

ತಹಶೀಲ್ದಾರ್ ಶ್ರೀನಿವಾಸ್, ರವಿ, ಆನಂದ್ ಕುಮಾರ್, ಮಂಜುನಾಥ್ ಡಿವೈಎಸ್‌ಪಿ ಮಂಜುನಾಥ್, ಇಒ ಲಕ್ಷ್ಮಣ್, ಪವಿತ್ರ ಹಾಗೂ ವಕೀಲ ನರಸಿಂಹಮೂರ್ತಿ, ತೊಂಡೊಟಿ ರಾಮಾಂಜಿ, ಮೈಲಾರಪ್ಪ, ಎಂ.ವೈ. ಶಿವಕುಮಾರ್, ಭರತ್ ಬೆಲ್ಲದಮಡಗು, ಮಹಾಲಿಂಗಪ್ಪ, ವೆಂಕಟೇಶ್ ಮೂರ್ತಿ, ಕೃಷ್ಣಮೂರ್ತಿ, ಸಿದ್ದಪ್ಪ, ರಂಗನಾಥ್, ಸಂಜೀವಪ್ಪ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.